ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅಕ್ರಮ ಗಾಂಜಾ ಆಯಿಲ್ ಸಾಗಾಟ ನಾಲ್ವರ ಬಂಧನ

Posted on: July 19, 2013

ಮಡಿಕೇರಿ :
ಅಕ್ರಮವಾಗಿ ಗಾಂಜಾ ಆಯಿಲ್ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸುವಲ್ಲಿ ಮಡಿಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

IMG_0594

ಸಿದ್ದಾಪುರ ಹುಂಡಿ ಪೈಸಾರಿಯ ಎಸ್.ಅಬ್ದುಲ್ ರಹೆಮಾನ್, ಹೈಸ್ಕೂಲ್ ಪೈಸಾರಿಯ ಪಿ.ಎಂ.ಷಾಜಿ, ಹೊಳೆಕೆರೆ ಪೈಸಾರಿಯ ಪಿ.ಮರ್ಕರ, ಪಿರಿಯಾಪಟ್ಟಣದ ಕೆ ಸಂತೋಷ್ ಎಂಬುವವರೆ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು ರೂ.40,000 ಮೌಲ್ಯದ 400 ಗ್ರಾಂ ಗಾಂಜಾ ಆಯಿಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಮಡಿಕೇರಿಯಿಂದ ಮೈಸೂರಿಗೆ ಗಾಂಜಾ ಆಯಿಲ್ ಅನ್ನು ಸಾಗಿಸುತ್ತಿರುವ ಕುರಿತಾಗಿ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿದ ಮಡಿಕೇರಿ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಎಸ್.ಪಿ, ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಎಸ್.ಪಿ, ಎಂ.ಎನ್ ಅನುಚೇತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮಡಿಕೇರಿ ನಗರ ಉಪನಿರೀಕ್ಷಕ ವೆಂಕಟೇ ಗೌಡ, ಸಿಬ್ಬಂದಿಗಳಾದ ಉದಯ್ ಕುಮಾರ್, ಶಿವರಾಜೇ ಗೌಡ, ದೇವರಾಜು, ಮಧು ಸೂಧನ್ ಪಾಲ್ಗೊಂಡಿದ್ದರು.

IMG_0597 IMG_0599 IMG_0603

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *