ಶ್ರೀ ಕುಮಾರ ಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವಕ್ಕೆ ಫೆ.7 ರಂದು ಚಾಲನೆ

Posted on: January 31, 2014

ಮಡಿಕೇರಿ :
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಶ್ರೀ ಕುಮಾರ ಲಿಂಗೇಶ್ವರ ಸ್ವಾಮಿ ದೇವಾಲಯದ ಅಷ್ಠ ಬಂಧ ಹಾಗೂ ಬ್ರಹ್ಮಕಲಶೋತ್ಸವ ಸಮಾರಂಭ ಫೆ.7 ರಿಂದ 9 ರವರೆಗೆ ನಡೆಯಲಿದೆ ಎಂದು ಧರ್ಮದರ್ಶಿ ಮಂಡಳಿಯ ಪ್ರಮುಖರಾದ ಎಸ್.ಜಿ.ಮೇದಪ್ಪ ತಿಳಿಸಿದ್ದಾರೆ.

IMG_0446
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ದೇವಾಲಯವನ್ನು ಅಭಿವೃದ್ಧಿ ಪಡಿಸಲಾಗಿದ್ದು, ವಿವಿಧ ದೈವಿಕ ಕಾರ್ಯಗಳಿಗೆ ಫೆ.7 ರಂದು ಚಾಲನೆ ನೀಡಲಾಗುವುದು ಎಂದರು.
3 ದಿನಗಳ ಎಲ್ಲಾ ದೈವಿಕ ಕಾರ್ಯಗಳು ಮಂಗಳೂರು ತಾಲ್ಲೂಕಿನ ಶಿಬರೂರು ಬ್ರಹ್ಮ ಶ್ರೀ ಗೋಪಾಲ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 9 ರಂದು ಶ್ರೀ ಕುಮಾರ ಲಿಂಗೇಶ್ವರ ಸ್ವಾಮಿ ದೇವರ ಅಷ್ಠಬಂಧ ಬ್ರಹ್ಮಕಲಶೋತ್ಸವ, ಮಹಾ ರಥೋತ್ಸವ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಅಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಹಿಸಲಿದ್ದಾರೆ ಎಂದು ಎಸ್.ಜಿ.ಮೇದಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಂಡಳಿ ಅಧ್ಯಕ್ಷ ಕೆ.ಬಿ.ಜೋಯಪ್ಪ, ಪ್ರಮುಖರಾದ ಡಿ.ಎಸ್.ಲಿಂಗರಾಜು, ಎಸ್.ಎ ಪ್ರತಾಪ್ ಹಾಗೂ ಕೆ.ಎಸ್ ಚಂದ್ರಾವತಿ ಉಪಸ್ಥಿತರಿದ್ದರು.

DSCF5065

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *