ಕನ್ಯಾಕಾಪರಮೇಶ್ವರಿ ದೇವಾಲಯ ಲೋಕಾಪರ್ಪಣೆ : ಜನಾಂಗಕ್ಕೆ ಜನಸಂಖ್ಯೆಗಿಂತ ಸಾಮಾಜಿಕ ಚಿಂತನೆ ಅಗತ್ಯ : ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಅಭಿಮತ

Posted on: February 2, 2014

ಮಡಿಕೇರಿ :
ಒಂದು ಜನಾಂಗಕ್ಕೆ ಜನಸಂಖ್ಯೆಗಿಂತ ಸಾಮಾಜಿಕ ಚಿಂತನೆ ಅಗತ್ಯವೆಂದು ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಶ್ರೀಕನ್ಯಾಕಾಪರಮೇಶ್ವರಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪ್ರತಿಯೊಬ್ಬರು ಸಮಾಜ ಸೇವೆಯಲ್ಲಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.

DSCF7115
ಮಡಿಕೇರಿಯ ಮಹದೇವಪೇಟೆಯಲ್ಲಿ ನವೀಕರಣಗೊಂಡಿರುವ ಶ್ರೀಕನ್ಯಾಕಾಪರಮೇಶ್ವರಿ ದೇವಾಲಯದಲ್ಲಿ ನಡೆದ ದೇವಿಯ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಪಾಲ್ಗೊಂಡು ಮಾತನಾಡಿದರು. ಆರ್ಯವೈಶ್ಯ ಜನಾಂಗದ ಮಂದಿ ಕರ್ನಾಟಕದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಆದರೆ ಯಾವುದೇ ಕ್ಷೇತ್ರದಲ್ಲಿ ಸಾಧನೆಯಲ್ಲಿ ಹಿಂದೆ ಬಿದ್ದಿಲ್ಲ. ಒಂದು ಜನಾಂಗಕ್ಕೆ ಸಂಖ್ಯೆ ಮುಖ್ಯವಲ್ಲ, ಬದಲಿಗೆ ಸಮಾಜಿಕ ಕಳಕಳಿ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣ ಮುಖ್ಯ ಎಂದು ಅಭಿಪ್ರಾಯಪಟ್ಟರು. ಸಮಾಜದಲ್ಲಾಗುತ್ತಿರುವ ಹೊಸ ಹೊಸ ಬದಲಾವಣೆಗಳೊಂದಿಗೆ ಹೊಂದಿಕೊಳ್ಳತ್ತಾ ನಂಬಿಕೆಯ ಆಧಾರದಲ್ಲಿ ಭದ್ರತೆಯನ್ನು ಕಂಡುಕೊಳ್ಳಬೇಕು. ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದು ಅಭಿಪ್ರಾಯಪಟ್ಟ ಡಿ.ಹೆಚ್.ಶಂಕರಮೂರ್ತಿ ಉತ್ತಮ ಮೌಲ್ಯಗಳನ್ನು ಕಾಪಾಡಿಕೊಳ್ಳುವಂತೆ ಕರೆನೀಡಿದರು.
ವಿಧಾನಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ ಕೊಡಗಿನಲ್ಲಿ ವಲಸಿಗರ ಸಂಖ್ಯೆ ಹೆಚ್ಚಾಗಿದ್ದು, ಮೂಲ ನಿವಾಸಿಗಳು ವಲಸಿಗರಂತಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸುಮಾರು 700 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳನ್ನು ಹೊಂದಿರುವ ಶಾಂತಿಪ್ರಿಯ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾದನೀಯವೆಂದರು.
ಹುಣಸೂರು ಶಾಸಕ ಮಂಜುನಾಥ್ ಮಾತನಾಡಿ ಆರ್ಯವೈಶ್ಯ ಸಮಾಜದ ಹೆಸರು ಸರ್ಕಾರದ ಜಾತಿಪಟ್ಟಿಯಲ್ಲಿ ಇನ್ನೂ ಕೂಡ ನಮೂದಾಗಿಲ್ಲ. ಈಗಿನ ಸರ್ಕಾರ 3ಬಿ ವರ್ಗಕ್ಕೆ ಸೇರಿಸುವ ಭರವಸೆ ನೀಡಿದ್ದು, ಇದು ಈಡೇರಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಬಹಳ ವರ್ಷಗಳ ಹಿಂದೆ ಬಿಜೆಪಿಗೆ ತನ್ನದೇ ಆದ ಸ್ವಂತ ಕಚೇರಿ ಇಲ್ಲದೆ ಇದ್ದಾಗ ಶ್ರೀಕನ್ಯಕಾ ಪರಮೇಶ್ವರಿ ದೇಗುಲದಲ್ಲಿ ಸಭೆ ನಡೆಸುತ್ತಿದ್ದುದ್ದನ್ನು ನೆನಪಿಸಿಕೊಂಡರು.
ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಶಾಸಕ ಅಪ್ಪಚ್ಚು ರಂಜನ್, ಆರ್ಯ ವೈಶ್ಯ ಸಮಾಜದ ಪ್ರಮುಖರಾದ ಅಶ್ವತ್ಥ ನಾರಾಯಣ ಸೇರಿದಂತೆ ಅನೇಕ ಗಣ್ಯರು ಕನ್ಯಾಕಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

DSCF7042 DSCF7043 DSCF7045 DSCF7046 DSCF7050 DSCF7051 DSCF7053 DSCF7054 DSCF7055 DSCF7058 DSCF7059 DSCF7061 DSCF7063 DSCF7065 DSCF7067 DSCF7074 DSCF7076 DSCF7077 DSCF7079 DSCF7082 DSCF7083 DSCF7084 DSCF7085 DSCF7086 DSCF7088 DSCF7093 DSCF7094 DSCF7101 DSCF7102 DSCF7109 DSCF7110 DSCF7111 DSCF7112 DSCF7113 IMG_0112 IMG_0115 IMG_0116 IMG_0118

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *