ಅಕ್ರಮ ಮರಳು ಸಾಗಾಟ : 15 ಲಾರಿಗಳು ವಶ : ಜಿಲ್ಲಾ ಪೊಲೀಸರ ಕಾರ್ಯಾಚರಣೆ

Posted on: October 13, 2014

ಮಡಿಕೇರಿ  :

ಯಾವುದೇ ಪರವಾನಗಿ ಇಲ್ಲದೆ ಮಂಗಳೂರಿನಿಂದ ಕೊಡಗು ಜಿಲ್ಲೆಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಮರಳನ್ನು ಜಿಲ್ಲೆಯ ಪೊಲೀಸರು ಲಾರಿ ಸಹಿತ ವಶಪಡಿಸಿಕೊಂಡಿದ್ದಾರೆ. ಒಟ್ಟು 15 ಲಾರಿಗಳು ಪೊಲೀಸರ ವಶದಲ್ಲಿದ್ದು, ಚಾಲಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದು ನೇತ್ರಾವತಿ ನದಿಯಿಂದ ತೆಗೆಯಲಾದ ಮರಳು ಎಂದು ಗುರುತಿಸಲಾಗಿದ್ದು, ಸುಮಾರು ೫ ಸಾವಿರ ಘನ ಅಡಿಯಷ್ಟು ಮರಳು ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳಿಗೆ ಮಾಹಿತಿ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ ನಿಂದ ಅಕ್ರಮವಾಗಿ ಮರಳು ಸಾಗಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಇಂದು ಮುಂಜಾನೆ ಮಡಿಕೇರಿ ಸಮೀಪ ಕಾಟಿಕೇರಿಯಲ್ಲಿ ಕಾರ್ಯಾಚರಣೆ ನಡೆಸಿ ಲಾರಿಗಳನ್ನು ಮರಳು ಸಹಿತ ವಶಕ್ಕೆ ತೆಗೆದುಕೊಂಡರು. ಎಸ್‌ಪಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ನಾಗೇಶ್, ಸಿಬ್ಬಂದಿಗಳಾದ ರಾಜೇಶ್, ತೀರ್ಥಕುಮಾರ್, ಯೋಗೇಶ್ ಕುಮಾರ್, ನಿರಂಜನ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

IMG_0143 - Copy

ಕಾಳಸಂತೆಯಲ್ಲಿ ಮರಳು ಮಾರಾಟ ::::

ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸ್ಥಗಿತಗೊಳಿಸಲಾಗಿದ್ದ ಮರಳು ಗಣಿಗಾರಿಕೆಯನ್ನು ಇನ್ನೂ ಕೂಡ ಆರಂಭಿಸದೆ ಇರುವುದರಿಂದ ಗುತ್ತಿಗೆದಾರರು ಮಂಗಳೂರು ಕಡೆಯಿಂದ ಬರುತ್ತಿರುವ ಮರಳನ್ನು ಖರೀಸುವುದು ಅನಿವಾರ್ಯವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಮರಳು ವ್ಯಾಪಾರಿಗಳು ಕಾಳಸಂತೆಯಲ್ಲಿ ಮರಳನ್ನು ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಇತ್ತೀಚೆಗೆ ಜಿಲ್ಲಾ ಬಿಜೆಪಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಅಕ್ರಮ ಮರಳು ಸಾಗಾಟದ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಆದರೆ ಮರಳಿನ ಕೊರತೆಯನ್ನು ನೀಗಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆIMG_0142

.l unnamed-(4)

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *