ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಹಿರಿಯ ಶುಶ್ರೂಷಕಿ ಗೀತಾ ಸಾವಿನ ಪ್ರಕರಣ : ಎಲ್ಲಾ ಆರೋಪಿಗಳ ಬಂಧನಕ್ಕೆ ಒತ್ತಾಯ : ಪುತ್ರಿಯಿಂದ ಎಸ್‌ಪಿ ಗೆ ದೂರು

Posted on: October 10, 2014

ಮಡಿಕೇರಿ :

ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ನಿವಾಸಿ ಸಿ.ಜನನ್ ಜೀತು ಅವರ ಪತ್ನಿ, ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಗೀತಾ(48) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಗೀತಾ ಅವರ ಹಿರಿಯ ಪುತ್ರಿ ನಿಖಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

Cr-3

ಸುಮಾರು 2 ವಾರಗಳ ಹಿಂದೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭ ಸೀಮೆಎಣ್ಣೆ ಸ್ಟವ್ ಸಿಡಿದು ಗೀತಾ ಗಾಯಗೊಂಡಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದರು. ಶೇ.80 ರಷ್ಟು ಗಾಯಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗೀತಾ ಅವರನ್ನು ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇತ್ತೀಚೆಗೆ ಗೀತಾ ಮೃತಪಟ್ಟಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸಂದರ್ಭವೇ ಘಟನೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಗೀತಾ ಅವರ ಹಿರಿಯ ಪುತ್ರಿ ನಿಖಿತ ಶ್ರೀಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಂದೆ ಸಿ.ಜನನ್ ಜೀತು, ದೊಡ್ಡಪ್ಪ ಜೀವು ಜೀವನ್, ದೊಡ್ಡಮ್ಮ ಶರ್‍ಲಿ ಜೀವನ್, ಅಜ್ಜ ಕಾಳಯ್ಯ ಹಾಗೂ ಅಜ್ಜಿ ನೀಲಮ್ಮ ಅವರುಗಳ ವಿರುದ್ಧ ಕೊಲೆ ಯತ್ನದ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದರು. ಇದೇ ಕಾರಣಕ್ಕೆ ತಂದೆ ಸಿ.ಜನನ್ ಜೀತು ಅವರನ್ನು ಬಂಧಿಸಲಾಗಿತ್ತು.

ಆದರೆ ಉಳಿದ ಆರೋಪಿಗಳ ಬಂಧನವಾಗಿಲ್ಲ ಎನ್ನುವ ಕಾರಣಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶರೀನ್ ಸುಬ್ಬಯ್ಯ ಅವರೊಂದಿಗೆ ಮಡಿಕೇರಿಗೆ ಆಗಮಿಸಿದ ನಿಖಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು. ನಂತರ ಮಾತನಾಡಿದ ಜಿ.ಪಂ.ಅಧ್ಯಕ್ಷೆ ಶರೀನ್ ಸುಬ್ಬಯ್ಯ ತಾಯಿಯನ್ನು ಕಳೆದುಕೊಂಡು ಸಾಕಷ್ಟು ನೊಂದಿರುವ ಮಕ್ಕಳು ನ್ಯಾಯಕ್ಕಾಗಿ ಹೋರಾಟಕ್ಕಿಳಿದಿದ್ದು, ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Cr-4 Cr-1 Cr-5 Cr-2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *