ಚಿತ್ರಕಲಾ ಸ್ಪರ್ಧೆ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

Posted on: November 9, 2014

ಮಡಿಕೇರಿ :
ಮಡಿಕೇರಿಯ ಕಾವೇರಿ ಭಕ್ತ ಮಂಡಳಿಯ ೬೦ನೇ ವರ್ಷಾಚರಣೆ ಹಿನ್ನಲೆಯಲ್ಲಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಗರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಆವರಣದಲ್ಲಿ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಚಿತ್ರಕಲಾ ಶಿಕ್ಷಕ ಪ್ರಸನ್ನ ಸ್ಪರ್ಧೆಗೆ ಚಾಲನೆ ನೀಡಿದರು.
ಕಾವೇರಿ ಭಕ್ತ ಮಂಡಳಿ ಅಧ್ಯಕ್ಷ ರವಿ ಮಾತನಾಡಿ ೬೦ ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ತಿಳಿಸಿದರು. ಇದೇ ನ.೧೪ ರಂದು ನಗರದ ಮೇಲಿನ ಗೌಡ ಸಮಾಜದಲ್ಲಿ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಂಧ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಿಸಲಾಗುವುದು ಎಂದರು.
ಸುಮಾರು ೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಗಳು ಪಾಲ್ಗೊಂಡಿದ್ದರು.
ಮಂಡಳಿಯ ಉಪಾಧ್ಯಕ್ಷ ಸತೀಶ್, ಕಾರ್ಯದರ್ಶಿ ವಿಜಯ್, ಸದಸ್ಯ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು. IMG_0052 IMG_0055 IMG_0056 IMG_0061 IMG_0063

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *