ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನ

Posted on: April 14, 2015

Aಡಾ.ಬಿ.ಆರ್. ಅಂಬೇಡ್ಕರ್ ಅವರ ಜನನ ಏಪ್ರಿಲ್ 14, 1891 ರಂದು ಮಧ್ಯಪ್ರದೇಶದಲ್ಲಿ. ಇಂದು ಭಾರತದದೆಲ್ಲಡೆ ಡಾ.ಬಿ.ಆರ್ ಅಂಬೇಡ್ಕರರ ಜನ್ಮ ದಿನಾಚರಣೆಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಡಾ.ಬಿ.ಆರ್ ಅಂಬೇಡ್ಕರ್ ರವರು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ‘ಸಂವಿಧಾನ ಶಿಲ್ಪಿ’ ಎಂದು ಕರೆಯುತ್ತಾರೆ.

ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯವರಾದ ಅಂಬೇಡ್ಕರರ ತಂದೆಯವರು ಮರಾಠಿ ಹಾಗೂ ಇಂಗ್ಲೀಷಿನಲ್ಲಿ ಕಲಿತಿದ್ದರು, ಅವರು ಬ್ರಿಟೀಷ್ ಸೈನ್ಯದಲ್ಲಿ ಸುಬೇದಾರ್‌ರಾಗಿ ಸೇವೆಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅವರು ತಮ್ಮ ಮಕ್ಕಳಿಗೆ ಸ್ವತಃ ಕಲಿಸಿ ಅವರ ಜ್ಞಾನಾರ್ಜನೆಯಲ್ಲಿ ಪ್ರೋತ್ಸಾಹಿಸಲು ಸಾಧ್ಯವಾಯಿತು.

1908ರಲ್ಲಿ ಅಂಬೇಡ್ಕರ್ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾದಾಗ, ಆಗಿನ ಜಾತಿ ವ್ಯವಸ್ಥೆಯಲ್ಲಿ ಅಸ್ಪೃಶ್ಯ ಎಂದು ಕಾಣಲ್ಪಡುತ್ತಿದ್ದ ತಮ್ಮ ಸಮಾಜಕ್ಕೆ ಮೊದಲನೆಯವರಾದರು. 1913 ರಿಂದ 1916 ರವರೆಗೆ ನ್ಯೂಯಾರ್ಕಿನ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಅರ್ಥ ಶಾಸ್ತ್ರ , ಸಮಾಜಶಾಸ್ತ್ರ, ಇತಿಹಾಸ, ತತ್ವ ಶಾಸ್ತ್ರ , ಮಾನವವಂಶಶಾಸ್ತ್ರ ಮತ್ತು ರಾಜನೀತಿ ಅಭ್ಯಾಸ ಮಾಡಿದರು. 1915ರಲ್ಲಿ ಅರ್ಥ ಶಾಸ್ತ್ರದಲ್ಲಿ ಎಂ.ಎ, ಪದವಿ ಗಳಿಸಿದರು. 1916 ರಲ್ಲಿ, ಅವರು ಮುಂದೆ ಪುಸ್ತಕರೂಪದಲ್ಲಿ ಪ್ರಕಟಿಸಿದ ಬ್ರಿಟಿಷ್ ಭಾರತದಲ್ಲಿ ಪ್ರಾಂತೀಯ ಹಣಕಾಸು ಪದ್ಧತಿಯ ವಿಕಾಸ ಎಂಬ ಮಹಾಪ್ರಬಂಧವನ್ನು ಮಂಡಿಸಿ, ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡರು. ಭಾರತದಲ್ಲಿ ಜಾತಿ ಪದ್ಧತಿ ತಂತ್ರ, ಹುಟ್ಟು ಮತ್ತು ಬೆಳವಣಿಗೆ ಎಂಬ ಪ್ರಬಂಧ ಅವರ ಮೊಟ್ಟಮೊದಲ ಪ್ರಕಾಶಿತ ಕೃತಿ.

A-11916 ಜೂನಿನಲ್ಲಿ ಅಮೇರಿಕದಲ್ಲಿ ಓದು ಮುಗಿಸಿದ ಅಂಬೇಡ್ಕರ್ ಮುಂದೆ ಲಂಡನ್ನಿನ ಲಂಡ ನ್ ಸ್ಕೂಲ್ ಆಫ್ ಎಕನಾಮಿಕ್ಸ್ ಎಂಡ್ ಪೊಲಟಿಕಲ್ ಸೈನ್ಸ್ ಸೇರಿ ನಂತರ ಗ್ರೇಸ್ ಇನ್ ಸಂಸ್ಥೆಯನ್ನು ಸೇರಿದರು. 1952, ಜೂನ್ 15ರಂದು ಕೊಲಂಬಿಯಾ ವಿಶ್ವವಿದ್ಯಾನಿಲಯವು ಅವರಿಗೆ ಕಾನೂನಿನ ಡಾಕ್ಟರೇಟ್(ಎಲ್‌ಎಲ್.ಡಿ) ಗೌರವ ಪದವಿ ಪ್ರದಾನ ಮಾಡಿತು. 1927ರಿಂದ 1932ರವರೆಗೆ, ಅಹಿಂಸಾತ್ಮಕ ಅಂದೋಳನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳಾರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಅಂದೋಳನಗಳು ಗಮನಾರ್ಹವಾಗಿವೆ.

ದೀನದಲಿತರ ಸಾಂಸ್ಕೃತಿಕ ಧಾರ್ಮಿಕ ಹಾಗೂ ಆರ್ಥಿಕ ಹಕ್ಕುಗಳನ್ನು ರಕ್ಷಿಸುವ ಉದ್ದೇಶವುಳ್ಳ ಮೂಲಭೂತ ಹಕ್ಕುಗಳ ಘೋಷಣೆಯನ್ನು ರೂಪಿಸಿದ್ದು ಅಂಬೇಡ್ಕರವರು ಮಾಡಿದ ಪ್ರಮುಖ ಕೆಲಸವಾಗಿತ್ತು. 1947ರ ಆಗಸ್ಟ್ 15 ರಂದು ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಜವಾಹರ್ಲಾಲ್ ನೆಹರೂ ಅವರ ಸಲಹೆ ಮೇರೆಗೆ ಅಂಬೇಡ್ಕರ್ ಕಾನೂನು ಮಂತ್ರಿಯಾದರು.  1947 ಡಿಸೆಂಬರ್ 19 ರಂದು ಭಾರತ ಮಸೂದೆ ಬ್ರಿಟಿಷ್ ಪಾರ್ಲಿಮೆಂಟ್ನಲ್ಲಿ ಮಂಡನೆಯಾಯಿತು. ಕೋಟ್ಯಾಂತರ ಜನರ ಜೀವನ ಸ್ಥಿತಿಗತಿಯನ್ನು ಅಂಬೇಡ್ಕರ್ ಅರಿತುಕೊಳ್ಳಬೇಕಿತ್ತು ತಮ್ಮ ಶಕ್ತಿ ಸಾಮಥ್ಯವನ್ನು ಪಣಕಿಟ್ಟು ಸಂವಿಧಾನ ಸಿದ್ಧಪಡಿಸಿ ಸಂವಿಧಾನ ಶಿಲ್ಪಿಯಾದರು.

 

 

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *