ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Posted on: July 20, 2015

ಮಡಿಕೇರಿ :

Wಕೆ.ಬಾಡಗ ಗ್ರಾಮ ಪಂಚಾಯಿತಿಯ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ, 23ರ ಸಂಜೆ 5 ಗಂಟೆ ಕೊನೆಯ ದಿನ ಆಗಿರುತ್ತದೆ.

ಹುದ್ದೆಯ ವಿವರ ಇಂತಿದೆ::: ಗುಮಾಸ್ಥ ಬೆರಳಚ್ಚುಗಾರ, (ಕ್ಲರ್ಕ್ ಕಮ್ ಕಂಪ್ಯೂಟರ್ ಆಪರೇಟರ್), ಹುದ್ದೆ 1, ಪದವಿಧರರಾಗಿರಬೇಕು (ಯಾವುದಾದರೂ) ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕನಿಷ್ಟ 6 ತಿಂಗಳ ಕೋರ್ಸ್ ಮಾಡಿ ಪ್ರಮಾಣಪತ್ರ ಹೊಂದಿರತಕ್ಕದ್ದು. ಪಿ.ಯು.ಸಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ತರಬೇತಿ ಪಡೆದಿದ್ದು ಪ್ರಮಾಣ ಪತ್ರ ಹೊಂದಿರಬೇಕು. ಅಟೆಂಡರ್(ಜವಾನ) ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಸ್ಥಳೀಯರಾಗಿರಬೇಕು. ಡಿ ದರ್ಜೆ ನೌಕರರು ಹುದ್ದೆಗೆ 7ನೇ ತರಗತಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಗ್ರಾಮ ಪಂಚಾಯತ್‌ಕಚೇರಿ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದಾಗಿದೆ.

 

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *