ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸಹೋದರತ್ವದ ರಕ್ಷಾಬಂಧನ

Posted on: August 29, 2015

raksha-bandhan-1ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಹಬ್ಬ ರಕ್ಷಾಬಂಧನ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಇದಾಗಿದೆ.

ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ.

ಭಾರತ ಸಂಸ್ಕೃತಿಯ ತವರು ಇಲ್ಲಿನ ಪ್ರತಿಯೊಂದು ಆಚರಣೆಗೂ ಅದರದೆ ಆದ ವಿಶೇಷತೆಯಿದೆ. ಅನೇಕ ಹಿನ್ನಲೆಯನ್ನು ಆಧಾರವಾಗಿಟ್ಟುಕೊಂಡು ಹಬ್ಬವನ್ನು ಆಚರಿಸಲಾಗುತ್ತದೆ. ರಕ್ಷಾಬಂಧನವು ಸಹ ಐತಿಹಾಸಿಕ ಕಥೆಗಳನ್ನೊಳಗೊಂಡಿದೆ. ಅಂದು ಯುದ್ಧದಲ್ಲಿ ಇಂದ್ರನು ರಾಕ್ಷಸರ ಜೊತೆ ಸೋಲುವ ಕ್ಷಣ ಬಂದಾಗ ಇಂದ್ರನು ಬೃಹಸ್ಪತಿಯ ಮೊರೆ ಹೋಗುತ್ತಾನಂತೆ ಬೃಹಸ್ಪತಿಯ ಸಲಹೆಯ ಮೇರೆಗೆ ಶ್ರಾವಣ ಹುಣ್ಣಿಮೆಯಂದು ರೇಷ್ಮೆ ದಾರವನ್ನು ಇಂದ್ರಾಣಿಯು ಇಂದ್ರನ ಕೈಗೆ ಕಟ್ಟುತ್ತಾಳೆ. ಇದರ ಪರಿಣಾಮವೋ ಏನೋ ಇಂದ್ರನು ಯುದ್ಧದಲ್ಲಿ ಜಯ ಹೊಂದುತ್ತಾನಂತೆ. ಇದು ಪೌರಾಣಿಕ ಕಥೆ ಈ ಹಿನ್ನಲೆಯಿಂದಲೇ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂಬುವುದು ಪ್ರತೀತಿ.

ಕೆಲವರು ಷ್ಯಾಶನ್‌ಗೋಸ್ಕರ ಈ ದಾರವನ್ನು ಕಟ್ಟಿಸಿಕೊಂಡರೆ ಇನ್ನು ಕೆಲವರು ಹುಡುಗಿಯನ್ನು ಪಠಾಯಿಸಲು ಕಟ್ಟಿಸಿಕೊಳ್ಳುವವರೂ ಇದ್ದಾರೆ. ಉಡುಗೊರೆ ಪಡೆಯುವ ಸಲುವಾಗಿ ರಾಖಿ ಕಟ್ಟುವವರು ಅದೆಷ್ಟೋ ಮಂದಿ ಒಟ್ಟಾರೆ ರಾಖಿಯ ಮಹತ್ವ ಹಾಗೂ ಹಿನ್ನೆಲೆಯನ್ನು ತಿಳಿದುಕೊಂಡವರು ಬೆರಳಣಿಕೆಯಷ್ಟು ಮಾತ್ರ. ಆದರೆ ಇಂದು ರಕ್ಷಾಬಂಧನ ಆದುನೀಕರಣಕ್ಕೆ ಸಿಲುಕಿ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತಿದೆ ಎಂದರೆ ವಿಪರ್ಯಾಸವೇ ಸರಿ.

raksha-bandhan-2 raksha-bandhan-3

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *