ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Posted on: August 6, 2015

ಮಡಿಕೇರಿ :

Wವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಚೇರಿಯ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕೊಡಗು ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವಂತೆ ಗ್ರಾಮೀಣ ಪುನರ್ವಸತಿ (ವಿಆರ್‌ಡಬ್ಲ್ಯು) ಕಾರ್ಯಕರ್ತರನ್ನು ಮಾಸಿಕ ಗೌರವಧನದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಾಸಿಕ ರೂ.2,000ಗಳ ಗೌರವಧನ ನೀಡಲಾಗುವುದು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಅಭ್ಯರ್ಥಿಯು ವಿಕಲಚೇತನರಾಗಿದ್ದು, ವಿಕಲಚೇತನತೆಯ ಸ್ವರೂಪ ಶೇ.75 ಕ್ಕಿಂತ ಕಡಿಮೆಯಿರಬೇಕು.

ವಿಕಲಚೇತನರ ಮನೆ ಮನೆಗೆ ಭೇಟಿ ಮಾಡಿ ಸಮೀಕ್ಷೆ ಮಾಡುವುದು ಹಾಗೂ ವಿವಿಧ ಸೌಲಭ್ಯಗಳನ್ನು ಕೊಡಿಸಲು ಶಕ್ತರಾಗಿರಬೇಕು. ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಂತಾ ಕಾಂಪ್ಲೆಕ್ಸ್, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಆಗಸ್ಟ್, 31 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್‌ಗಳ ಪಟ್ಟಿ ಇಂತಿದೆ. ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ, ಬೇಂಗೂರು, ಬಲ್ಲಮಾವಟಿ, ಚೆಂಬು, ಗಾಳಿಬೀಡು, ಕರಿಕೆ, ಕೆ.ನಿಡುಗಣೆ, ಕುಂದಚೇರಿ, ಕುಂಜಿಲ, ಕೊಣಂಜಗೇರಿ, ಮಕ್ಕಂದೂರು, ನರಿಯಂದಡ. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ, ಬ್ಯಾಡಗೊಟ್ಟ, ಬೆಟ್ಟದಳ್ಳಿ, ಬೇಳೂರು, ಚೆಟ್ಟಳ್ಳಿ, ದುಂಡಳ್ಳಿ, ದೊಡ್ಡಮಳ್ತೆ, ಗೌಡಳ್ಳಿ, ಗರ್ವಾಲೆ, ಹಂಡ್ಲಿ, 7ನೇ ಹೊಸಕೋಟೆ, ಐಗೂರು, ಕೊಡ್ಲಿಪೇಟೆ, ಕಂಬಿಬಾಣೆ, ಕುಶಾಲನಗರ, ಮಾದಾಪುರ, ನೆರುಗಳಲೆ, ಶನಿವಾರಸಂತೆ, ವಾಲ್ನೂರು ತ್ಯಾಗತ್ತೂರು.

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಅರುವತ್ತೋಕ್ಲು, ಬಾಳೆಲೆ, ಬಿಟ್ಟಂಗಾಲ, ಬಿರುನಾಣಿ, ಬಿ.ಶೆಟ್ಟಿಗೇರಿ, ಬಲ್ಯಮಂಡೂರು, ಚಂಬೆಬೆಳ್ಳೂರು, ಚೆನ್ನಯ್ಯನಕೋಟೆ, ದೇವರಪುರ, ಗೋಣಿಕೊಪ್ಪ, ಹೊಸೂರು, ಹುದಿಕೇರಿ, ಹಾತೂರು, ಹಾಲುಗುಂದ, ಕದನೂರು, ಕಾರ್ಮಾಡು, ಕಡಂಗಾಲ, ಕಾನೂರು, ಕಿರುಗೂರು, ಕುಟ್ಟ, ಮಾಯಾಮುಡಿ, ನಿಟ್ಟೂರು, ನಾಲ್ಕೇರಿ, ಪಾಲಿಬೆಟ್ಟ, ಪೊನ್ನಂಪೇಟೆ, ಪೊನ್ನಪ್ಪಸಂತೆ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಹಾಗೂ ತಿತಿಮತಿ. ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂ.ಸಂ: 08272-222829 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *