ರಿಸರ್ವ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

Posted on: September 23, 2015

ಮಡಿಕೇರಿ :

Policeಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿಶೇಷ ರಿಸರ್ವ ಪೊಲೀಸ್ ಕಾನ್ಸಟೇಬಲ್ (ಪುರುಷ ಹಾಗೂ ಮಹಿಳಾ) ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು www.ksp.gov.in ಮುಖಾಂತರ ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 6 ಕೊನೆಯ ದಿನವಾಗಿರುತ್ತದೆ.

ಎಸ್.ಎಸ್.ಎಲ್.ಸಿ, ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ದಿನಾಂಕ:6-10-2015 ಕ್ಕೆ ಅನ್ವಯವಾಗುವಚಿತೆ ಕನಿಷ್ಟ 18 ವರ್ಷಗಳಾಗಿರಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷಗಳು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 27 ವರ್ಷಗಳು. ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿ 30 ವರ್ಷಗಳು.

ನೇಮಕಾತಿ ಹಂತಗಳು :::
ಸಹಿಷ್ಣುತೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆ, ಹಂತ-1ರಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.100. ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250. ಹುದ್ದೆಗಳ ಸಂಖ್ಯೆ:-ವಿಶೇಷ ರಿಸರ್ವ ಪೊಲೀಸ್ ಕಾನ್ಸೇಟಬಲ್(ಪುರುಷ)-731, ವಿಶೇಷ ರಿಸರ್ವ್ ಪೊಲೀಸ್ ಕಾನ್ಸೇಟಬಲ್ (ಮಹಿಳಾ)- 91 ಆಗಿರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *