ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ

Posted on: October 12, 2015

ಮಡಿಕೇರಿ :

Wಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿನ ಹಣಕಾಸಿನ ನೆರವಿನೊಂದಿಗೆ ಗರಿಷ್ಟ 10 ಲಕ್ಷದವರೆಗಿನ ಬಂಡವಾಳದೊಂದಿಗೆ ಸಣ್ಣ ಕೈಗಾರಿಕೆ ಘಟಕಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಅಭ್ಯರ್ಥಿಗಳು 21 ರಿಂದ 35 ವರ್ಷದವರೆಗೆ (ಸಾಮಾನ್ಯ ವರ್ಗದವರಿಗೆ) ಮತ್ತು 45 ವರ್ಷದವರೆಗೆ ವಿಶೇಷ ವರ್ಗದವರಿಗೆ/ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು, ಮಹಿಳೆಯರು ಗ್ರಾಮೀಣ ಭಾಗದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ರೂ.5 ಲಕ್ಷದ ಮೇಲ್ಪಟ್ಟ ಯೋಜನೆಗಳಿಗೆ ಕನಿಷ್ಟ ೮ನೇ ತರಗತಿ ಪಾಸಾಗಿರಬೇಕು. ಈ ಯೋಜನೆಯಡಿ ಯಾವುದೇ ವ್ಯಕ್ತಿ ಅಥವಾ ಅವರ ಕುಟುಂಬದ ಸದಸ್ಯರು ಪಿ.ಎಂ.ಇ.ಜಿ.ಪಿ., ಪಿ.ಎಂ.ಆರ್.ವೈ, ಆರ್.ಇ.ಜಿ.ಪಿ, ಅಡಿಯಲ್ಲಿ ಸಹಾಯಧನ, ಅಂಚಿನ ಹಣವನ್ನು ಪಡೆದಿದ್ದರೆ ಅಂತಹ ವ್ಯಕ್ತಿಗಳು ಅರ್ಜಿ ಹಾಕಲು ಅರ್ಹರಿರುವುದಿಲ್ಲ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಹೊಸ ಕೈಗಾರಿಕಾ ಘಟಕಗಳಿಗೆ ಹಣಕಾಸಿನ ನೆರವನ್ನು ಒದಗಿಸಿ ಶೇ.25 ರಿಂದ 35 ರವರೆಗೆ ಸಹಾಯಧನವನ್ನು ಸರ್ಕಾರದಿಂದ ನೀಡಲಾಗುವುದು ಹಾಗೂ ಇದರ ಅರ್ಜಿಗಳನ್ನು ಹಾಗೂ ವಿವರಗಳನ್ನು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಲಿ ಕೊಡಗು ಜಿಲ್ಲೆ ಮಡಿಕೇರಿಯಿಂದ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳುವುದು. ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿರುತ್ತದೆ. ಕಚೇರಿಯ ವಿಳಾಸ: ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಲಿ, ಜಿಲ್ಲಾ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಕೊಡಗು ಜಿಲ್ಲೆ, ಮಡಿಕೇರಿ. ದೂ.ಸಂ: 08272-225946 ಮೊಬೈಲ್ ನಂ. 9480825630 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *