ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ : ಮೂವರು ಯೋಧರು ಹುತಾತ್ಮ

Posted on: October 5, 2015

Armyಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಕುಪ್ವಾರ ಜಿಲ್ಲೆಯ ಹಫ್ರಾಡಾ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಮೂವರು ಯೋಧರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಕುಪ್ವಾರ ಜಿಲ್ಲೆಯ ದೊರ್ಪೊರಾ ಗ್ರಾಮದಲ್ಲಿ ಒರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಪ್ವಾರ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರೊಂದಿಗೆ ಗುಂಡಿನ ಕಾಳ ನಡೆಯುತ್ತಿದೆ. ನಿನ್ನೆ ಅಥವಾ ಇದಕ್ಕೂ ಮೊದಲು ಉಗ್ರರು ಅಕ್ರಮವಾಗಿ ಕಾಶ್ಮೀರವನ್ನು ಪ್ರವೇಶಿಸಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಉಗ್ರರೊಂದಿಗೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *