ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಭಕ್ತ ಸಮೂಹ

Posted on: October 17, 2015

ಮಡಿಕೇರಿ :

ಕನ್ನಡ ನಾಡಿನ ಜೀವನದಿ ಕಾವೇರಿಯ ತವರು ತಲಕಾವೇರಿಯಲ್ಲಿ ತಾಯಿ ಕಾವೇರಿ ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದಳು. ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ಮಧ್ಯರಾತ್ರಿ 12 ಗಂಟೆ 16 ನಿಮಿಷಕ್ಕೆ ಕಾವೇರಿ ಕುಂಡಿಕೆಯಲ್ಲಿ ತೀರ್ಥೋದ್ಭವವಾಯಿತು.DSC_9331

ಪವಿತ್ರ ಮುಹೂರ್ತ ಮಿಥುನ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗುತ್ತಿದ್ದಂತೆ ಬ್ರಹ್ಮಕುಂಡಿಕೆ ಬಳಿಯ ಪುಷ್ಕರಣಿಗೆ ಧುಮುಕಿದ ಸಾವಿರಾರು ಭಕ್ತರು ಕಾವೇರಿ ತೀರ್ಥ ಪಡೆಯಲು ಮುಗಿ ಬಿದ್ದರು. ಮುಂಜಾನೆಯಿಂದ ನಿರಂತರವಾಗಿ ತಲಕಾವೇರಿಯಲ್ಲಿ ಹೋಮ ಹವನಾದಿ ವಿಶೇಷ ಪೂಜೆಗಳು ನಡೆದವು. ತೀರ್ಥೋದ್ಭವಕ್ಕೂ ಅರ್ಧ ಗಂಟೆಗೆ ಮೊದಲು ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ತಕ್ಕ ಮುಖ್ಯಸ್ಥರು ಭಂಡಾರವನ್ನು ಸಾಂಪ್ರದಾಯಿಕವಾಗಿ ತಲಕಾವೇರಿಗೆ ತಂದರು. ಅರ್ಚಕರ ತಂಡ ತೀರ್ಥ ಕುಂಡಿಕೆಗೆ ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ಮಾಡುತ್ತಿದ್ದಂತೆ ತೀರ್ಥೋದ್ಭವವಾಯಿತು.DSC_9499

ಮೈಸೂರು, ಮಂಡ್ಯ, ಬೆಂಗಳೂರು, ತಮಿಳು ನಾಡು ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಜಮಾಯಿಸಿ ಕಾವೇರಿ ತುಲಾ ಸಂಕ್ರಮಣದ ಕ್ಷಣವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಭಾಗಮಂಡಲದಲ್ಲಿ ಕೇಶ ಮುಂಡನ ಹರಕೆಯನ್ನು ತೀರಿಸಿದ ಭಕ್ತರು ಪಿಂಡ ಪ್ರದಾನ ಆಚಾರ ವಿಚಾರಗಳಲ್ಲೂ ಪಾಲ್ಗೊಂಡರು. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಭಕ್ತರು ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಲಕಾವೇರಿಯೆಡೆಗೆ ಪಯಣ ಬೆಳೆಸಿದರು.

ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ತಲಕಾವೇರಿ ಮತ್ತು ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಹಾಗೂ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಿತ್ತು. ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದ ಪೊಲೀಸ್ ಇಲಾಖೆ ವಾಹನಗಳ ನಿಲುಗಡೆಗೂ ಕ್ರಮ ಕೈಗೊಂಡಿತ್ತು. ನೂರಾರು ವಾಹನಗಳು ಸಾಲು ಗಟ್ಟಿ ನಿಂತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.DSC_9531 DSC_9529 DSC_9517 DSC_9507 DSC_9502 DSC_9499 DSC_9497 DSC_9469 DSC_9466 DSC_9461 DSC_9455 DSC_9443 DSC_9431 DSC_9428 DSC_9415 DSC_9405 DSC_9391 DSC_9331 DSC_9278

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *