ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಚಾಲನೆ

Posted on: November 21, 2015

ಮಡಿಕೇರಿ :

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಜಾನಪದ ಹಾಡುಗಾರಿಕೆ, ಭಾವಗೀತೆ ಹೀಗೆ ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡುವಂತಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರನ್ ಅವರು ತಿಳಿಸಿದ್ದಾರೆ.      ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

P1780484

ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ತಮಗೆ ಆಸಕ್ತಿ ಇರುವ ಜಾನಪದ, ಸಂಗೀತ, ಕಲೆ, ಚಿತ್ರಕಲೆ, ನೃತ್ಯ ಹೀಗೆ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತಾಗಬೇಕು ಎಂದು ಶ್ರೀಧರನ್ ಅವರು ಸಲಹೆ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜನಾರ್ದನ ಅವರು ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಬೇಕು ಎಂದರು.

ಬಿ.ಆರ್.ಸಿ. ಕೇಂದ್ರದ ಸಮನ್ವಯಾಧಿಕಾರಿ ರಾಮಸ್ವಾಮಿ ಗೌಡ, ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿದರು, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಸಂತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಸಂಘದ ಉಪಾಧ್ಯಕ್ಷರಾದ ಮೀನಾಕ್ಷಿ, ಜಗನ್ನಾಥ್, ಸುಕ್ರುದೇವೇಗೌಡ, ಮಂಜುಳ, ಜಯಮ್ಮ ಮತ್ತಿತರರು ಇದ್ದರು. ಮಡಿಕೇರಿ ತಾಲ್ಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು ನಾನಾ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಗಮನ ಸೆಳೆದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *