ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಮದೆಮಹೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ತಂಡ ಪ್ರಥಮ ಸ್ಥಾನ

Posted on: November 5, 2015

ಮಡಿಕೇರಿ :

ಸಾರ್ವಜನಿಕ ಶಿಕ್ಷಣ ಇಲಾಖೆಯು ಅಕ್ಟೋಬರ್, ೨೬ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಟೀಲ್‌ನಲ್ಲಿ ನಡೆಸಿದ ವಿಭಾಗ ಮಟ್ಟದ ಪ್ರೌಢಶಾಲಾ ಹುಡುಗರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಮದೆನಾಡಿನ ಮದೆಮಹೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ಸಚಿನ್ ಕೆ.ಆರ್, ಮಿಲನ್ ಡಿ.ಪಿ., ಪ್ರವೀಣ್ ಕೆ.ಆರ್., ಹಿತೇಶ್ ಎನ್.ಎ., ಲಿಖಿತ್ ಎನ್.ಆರ್., ಪುರುಷೋತ್ತಮ ಎಂ.ಜೆ., ಪೃಥ್ವಿ ಪಿ.ಡಿ. ಹಾಗೂ ದರ್ಶನ್ ಕೆ.ಯು ಇವರು ಭಾಗವಹಿಸಿದ್ದರು. ನವೆಂಬರ್ ತಿಂಗಳಿನಲ್ಲಿ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ ಎಂದು ಮದೆಮಹೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

School-2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *