ಮಡಿಕೇರಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Posted on: November 9, 2015

ಮಡಿಕೇರಿ :

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸ.ಪ.ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರ ಉದ್ಘಾಟಿಸಿದರು.
ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಕೋಲಾಟ, ಜನಪದ ನೃತ್ಯ, ಮಣ್ಣಿನ ಮಾದರಿ, ಭಾಷಣ ಸ್ಪರ್ಧೆ, ಭಾವಗೀತೆ ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

DSC_7824 DSC_7821 DSC_7833 DSC_7829 DSC_7814

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *