ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಹುತ್ತರಿ ಆಚರಣೆ

Posted on: November 27, 2015

ಮಡಿಕೇರಿ :

ಧಾನ್ಯ ಲಕ್ಷ್ಮಿಯನ್ನು ಮನೆತುಂಬಿಸಿಕೊಳ್ಳುವ ಹುತ್ತರಿ ಹಬ್ಬವನ್ನು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ಕೊಡವ ಸಮಾಜ, ಕೊಡವ ಸಾಹಿತ್ಯ ಅಕಾಡೆಮಿ, ಅರೆಭಾಷಾ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಸಂಪ್ರದಾಯ ಬದ್ಧವಾಗಿ ಹುತ್ತರಿ ಹಬ್ಬವನ್ನು ಆಚರಿಸಲಾಯಿತು.

ದೇವಾಲಯದ ಆವರಣದಲ್ಲಿರುವ ಗದ್ದೆಯಲ್ಲಿ ಅರ್ಚಕ ವರ್ಗ ಧಾನ್ಯ ಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕದಿರು ಕೊಯ್ಯಲಾಯಿತು. ಕೊಡಗಿನ ವಾದ್ಯಗೋಷ್ಠಿಯೊಂದಿಗೆ ಕದಿರನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ದೇವಾಲಯದಲ್ಲಿ ಮಹಾಮಂಗಳಾರತಿ ಮಾಡಲಾಯಿತು. ನೆರೆದಿದ್ದ ನೂರಾರು ಭಕ್ತರಿಗೆ ಕದಿರು ಹಾಗೂ ಪ್ರಸಾದವನ್ನು ವಿತರಿಸಲಾಯಿತು.

DSC_1368 DSC_1364 DSC_1385 DSC_1334 DSC_1397

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *