ಅರೆಕಾಡಿನಲ್ಲಿ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ

Posted on: November 3, 2015

ಸಿದ್ದಾಪುರ :

School-4ಸಮೀಪದ ಅರೆಕಾಡು ಸರ್ಕಾರಿ ಶಾಲೆಯಲ್ಲಿ ಕಡಗದಾಳು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅದ್ದೂರಿಯಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಗ್ರಾಮದ ಮೇಜರ್ ದೇವಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿಭಾ ಕಾರಂಜಿಗೆ ಶುಭಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ ಚೆನ್ನಿಗಯ್ಯ, ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷ ಯೂಸೂಫ್, ಸ್ಥಳೀಯ ಯುವಕ ಸಂಘದ ಅಧ್ಯಕ್ಷ ಆನಂದ್ ರಘು, ಸಂಪನ್ಮೂಲ ವ್ಯಕ್ತಿಗಳಾದ ರಶ್ಮಿ, ಮಂಜುಳ, ಶಾಲಾ ಶಿಕ್ಷಕಿ ಪದ್ಮಾವತಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನಪದ ಕೋಲಾಟ, ಛದ್ಮವೇಷ, ನೃತ್ಯ ಗಮನ ಸೆಳೆಯಿತು. ವಿದ್ಯಾರ್ಥಿಯೋರ್ವ ಟಿಪ್ಪು ಸುಲ್ತಾನ್ ವೇಷ ತೊಟ್ಟು ಗಮನ ಸೆಳೆದಿದ್ದು ಕಂಡು ಬಂತು.

School-3 School-1 School-2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *