ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಿಲ್ಲೆಯಲ್ಲಿ ಸಂಕ್ರಾಂತಿಯ ಸಡಗರ: ಮುತ್ತಪ್ಪ ದೇವಾಲಯದಲ್ಲಿ 26ನೇ ವರ್ಷದ ಸಂಕ್ರಾಂತಿ ಮಹೋತ್ಸವ

Posted on: January 16, 2016

ಮಡಿಕೇರಿ:

ದಕ್ಷಿಣ ಭಾರತದಲ್ಲಿ ಆಚರಿಸಲ್ಪಡುವ ಮುಖ್ಯ ಹಬ್ಬ ಸಂಕ್ರಾಂತಿ. ಪೈರು ತೆಗೆಯುವ ಸಂದರ್ಭ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಈ ಸಂಕ್ರಾತಿ ಹಬ್ಬ ಬಹು ಮುಖ್ಯವಾಗಿದೆ.
DSC_3658

ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡು ಬರುವುದು ಎಳ್ಳುಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ ಎಳ್ಳುಹಂಚುವುದು ಸಂಕ್ರಾಂತಿಯ ಸಂಪ್ರದಾಯ.ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಹಾಗೂ ಕಬ್ಬಿನ ತುಂಡುಗಳನ್ನು ಕೂಡ ಬೀರುತ್ತಾರೆ. ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆತೆಗೆದ ಕಡಲೇ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ ಎಳ್ಳುಬೆಲ್ಲ ತಯಾರಿಸಿ, ತಮ್ಮ ಬಂದು ಭಾಂದವರಿಗೆ ಸ್ನೇಹಿತರಿಗೆ ಎಳ್ಳು ತಿಂದು ಒಳ್ಳೆ ಮಾತನಾಡು ಎಂದು ಶುಭಕೋರುತ್ತಾರೆ.
ತಮಿಳುನಾಡಿನಲ್ಲಿ ಈ ಹಬ್ಬವನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಇಲ್ಲಿ ಈ ಹಬ್ಬವನ್ನು 4 ದಿನಗಳ ಕಾಲ ಆಚರಿಸಲಾಗುತ್ತದೆ. ಪೊಂಗಲ್/ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಹೊಸ ಬಟ್ಟೆ ತೊಟ್ಟು, ಸಂಮೃದ್ಧಿಯ ಸಂಕೇತವಾಗಿ ಹಾಲು- ಬೆಲ್ಲವನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ. ನಂತರ ಮಾಟ್ಟು ಪೊಂಗಲ್ ಅಂದರೆ ಗೋ ಪೂಜೆ ಮಾಡಲಾಗುತ್ತದೆ. ತಮಿಳುನಾಡಿನ ಕೆಲವೆಡೆ ಜಲ್ಲಿಕಟ್ಟು ಎಂಬ ಹೆಸರಿನ ಗೂಳಿಯನ್ನು ಪಳಗಿಸುವ ಆಟ ನಡೆಸಲಾಗುತ್ತದೆ.

ಕೇರಳದಲ್ಲಿ ಈ ಹಬ್ಬವನ್ನು ಅಯ್ಯಪ್ಪ ಸ್ವಾಮಿಯ ಉತ್ಸವ ಹಾಗೂ ಪೂಜೆಗಳನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.
ಈ ದಕ್ಷಿಣ ಭಾರತದಲ್ಲಿ ಭಿನ್ನ ವಿಭಿನ್ನವಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಜ.1 ರಂದು ಹೊಸ ವರ್ಷಾಚರಣೆ ಮಾಡಿದರೆ. ನಮ್ಮ ದೇಶದಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುವುದರ ಮೂಲಕ ಹೊಸವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.
DSC_3664

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *