ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪಿಯನ್ನು ಬಂಧಿಸದ ಹಿನ್ನಲೆ :ಎಸ್‌ಪಿ ಕಛೇರಿಗೆ ಮುತ್ತಿಗೆ

Posted on: January 16, 2016

ಮಡಿಕೇರಿ:

ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪಿಯನ್ನು ಬಂಧಿಸದ ಹಿನ್ನಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಎಸ್‌ಪಿ ಕಛೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಪ್ರತಿನಿಧಿಗಳ ಸಮಸ್ಯೆ ಆಳಿಸಿದ ಎಸ್‌ಪಿ ವರ್ತಿಕಾ ಕಟಿಯಾರ್ ಇನ್ನು ಎರಡು ವಾರಗಳಲ್ಲಿ ಆರೋಪಿಯನ್ನು ಬಂಧಿಸುವುದಾಗಿ ಚಾನಲ್ ೨೪ ಕರ್ನಾಟಕಕ್ಕೆ ತಿಳಿಸಿದ್ದಾರೆ.
DSC08295
ಕಳೆದ ನವೆಂಬರ್ ೨೦ರಂದು ಕಿರಗಂದೂರು ನಿವಾಸಿ ಉತ್ತಯ್ಯ ಎಂಬವರ ಮೇಲೆ ಸ್ಥಳೀಯ ನಿವಾಸಿ ಕೆ.ಪಿ. ಮೋಹನ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಆಯುಧಗಳಿಮದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿ ಒಂದುವರೆ ತಿಂಗಳು ಕಳೆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಇದರಿಂದ ತಮಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಎಸ್‌ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕೂಡಲೇ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭ ಸ್ಥಳಕ್ಕಾಗಮಿಸಿದ ಎಸ್‌ಪಿ ವರ್ತಿಕಾ ಕಟಿಯಾರ್ ಅವರ ಬಳಿ ಕಿರಗಂದೂರು ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರಲ್ಲದೆ, ಆರೋಪಿಯನ್ನು ಬಂಧಿಸುವುದರೊಂದಿಗೆ ಹಲ್ಲೆಗೊಳಗಾದ ಉತ್ತಯ್ಯ ಅವರ ಚಿಕಿತ್ಸಾ ವೆಚ್ಚವನ್ನು ಮೋಹನ್‌ರಿಂದ ವಸೂಲಿ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಸಮಸ್ಯೆಗಳನ್ನು ಕೂಲಂಕುಶವಾಗಿ ಆಲಿಸಿದ ಬಳಿಕ ಮಾತನಾಡಿದ ಎಸ್‌ಪಿ ವರ್ತಿಕಾ ಕಟಿಯಾರ್, ಆರೋಪಿಯಿಂದ ಹಣ ವಸೂಲು ಮಾಡುವ ಬಗ್ಗೆ ನೀವು ಸರ್ಕಾರಕ್ಕೆ ಮನವಿ ಸಲ್ಲಿಸಬೇಕಾಗಿದೆ. ಆದರೆ ಇನ್ನು ಎರಡು ವಾರದಲ್ಲಿ ಆರೋಪಿಯನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಈ ಬಗ್ಗೆ ಚಾನಲ್ ೨೪ ಕರ್ನಾಟಕಕ್ಕೆ ಮಾಹಿತಿ ನೀಡಿದ ಎಸ್‌ಪಿ ವರ್ತಿಕಾ ಕಟಿಯಾರ್, ಕಿರಗಂದೂರುವಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರದಲ್ಲಿ ಆರೋಪಿಯನ್ನು ಬಂಧಿಸಲಾಗುವುದು ಎಂದರು.
ಇನ್ನು ಮಾಧ್ಯಮದೊಂದಿಗೆ ಅಳಲು ತೋಡಿಕೊಂಡ ಸ್ಥಳೀಯ ನಿವಾಸಿಗಳು, ಕಿರಗಂದೂರುವಿನ ಕೆ.ಪಿ. ಮೋಹನ್ ಉತ್ತಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ, ಹಾಸನ ಮತ್ತು ಬೆಂಗಳೂರಿನ ನಿಮಾನ್ಸ್‌ನಲ್ಲಿ ಚಿಕಿತ್ಸೆ ಪಡೆದು ಇದೀಗ ಮಡಿಕೇರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಉತ್ತಯ್ಯ ಕುಟುಂಬ ಬಡವರಾಗಿರುವುದರಿಂದ ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ ಬೀಮವಾದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಸೂಕ್ತ ನ್ಯಾಯ ದೊರಕಿಸಿಕೊಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸಮಿತಿ ಪ್ರಮುಖರು ಎಚ್ಚರಿಸಿದ್ದಾರೆ.
DSC08319-(1)

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *