ವಿಷ ಸೇವಿಸಿ ಮಾಜಿ ಗ್ರಾ.ಪಂ ಸದಸ್ಯ ಆತ್ಮಹತ್ಯೆ

Posted on: March 20, 2017

man-wants-to-commit-suicide-eating-pills-table-58796587
ಸಿದ್ದಾಪುರ:- ವಿಷ ಸೇವಿಸಿ ಮಾಜಿ ಗ್ರಾ.ಪಂ ಸದಸ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ.
ಗುಹ್ಯ ಗ್ರಾಮದ ನಿವಾಸಿ, ಸಿದ್ದಾಪುರ ಗ್ರಾ.ಪಂ ಮಾಜಿ ಸದಸ್ಯ ವೈ.ಕೆ ಮಾರ (೫೦) ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಇರ್ವರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಸುಬ್ರಮಣ್ಯ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *