ಆ.೧೪ ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಮಾರಂಭ

Posted on: August 12, 2017

images (1)ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್, ೧೪ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಮಾರಂಭ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಹಾಮಂಡಳಿ ನಿಗಮ ನಿಯಮಿತದ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಎಂ.ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಗೊಲ್ಲ ಸಮಾಜದ ಜಿಲ್ಲಾಧ್ಯಕ್ಷರಾದ ಆಚೀರ ಎಸ್.ನಾಣಯ್ಯ, ಮಡಿಕೇರಿ ಇಸ್ಕಾನ್ ಮುಖ್ಯಸ್ಥರಾದ ಜೆ.ಪಿ.ರಾಜಣ್ಣ, ಬೆಂಗಳೂರು ಇಸ್ಕಾನ್‌ನ ಧೀನಾನಾಥ್ ಚೈತನ್ಯದಾಸ್ ಇತರರು ಪಾಲ್ಗೊಳ್ಳಲಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *