ಅತ್ಯಾಚಾರ ಆರೋಪಿಗೆ 5 ವರ್ಷ ಜೈಲು

Posted on: October 10, 2017

downloadಮಡಿಕೇರಿ: ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನ್ಯಾಯಾಲಯ 5 ವರ್ಷಗಳ ಶಿಕ್ಷೆ ಹಾಗೂ 24 ಸಾವಿರ ರೂ. ದಂಡ ವಿಧಿಸಿದೆ.

2014ರ ಜೂ. 11ರಂದು ಸಿದ್ದಾಪುರ ಠಾಣೆ ವ್ಯಾಪ್ತಿಗೆ ಸೇರಿದ ಹೊಸೂರು ಬೆಟ್ಟಗೇರಿ ಗ್ರಾಮದ ಬಾಲಕಿಯನ್ನು ಮೇಕೂರು ಹೋಸ್ಕೇರಿ ಗ್ರಾಮದ ಎಸ್‌.ಸಾಯುಜ್‌ ಪುಸಲಾಯಿಸಿ, ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಕುರಿತು ವಾದ ಆಲಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶÜ ಆರ್‌.ಕೆ.ಜಿ.ಎಂ. ಮಹಾಸ್ವಾಮೀಜಿ ಅವರು ತೀರ್ಪು ನೀಡಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ 5 ವರ್ಷ ಶಿಕ್ಷೆ, 10 ಸಾವಿರ ರೂ. ದಂಡ, ಪರಿಶಿಷ್ಟ ಜಾತಿ ಬಾಲಕಿ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ 1 ವರ್ಷ ಸಜೆ, ಸಾವಿರ ರೂ. ದಂಡ, ಲೈಂಗಿಕ ದೌರ್ಜನ್ಯ ತಡೆ ಅಡಿ 5 ವರ್ಷ ಸಜೆ ಹಾಗೂ 5 ಸಾವಿರ ರೂ. ದಂಡ, ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ 3 ವರ್ಷ ಸಜೆ ಹಾಗೂ 3 ಸಾವಿರ ರೂ. ದಂಡ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯಡಿ 5 ವರ್ಷ ಸಜೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ, ಸಂಗ್ರಹವಾಗುವ 24 ಸಾವಿರ ರೂ. ದಂಡದಲ್ಲಿ 22 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ.

One thought on “ಅತ್ಯಾಚಾರ ಆರೋಪಿಗೆ 5 ವರ್ಷ ಜೈಲು

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *