ಜಲಪಾತ ವೀಕ್ಷಣೆಗೆ ತೆರಳಿದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ

Posted on: October 2, 2017

1npk..1ನಾಪೋಕ್ಲು:-ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆ ತೆರಳಿದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನರಿಯಂದಡ ಗ್ರಾಮಪಂಚಾಯಿತಿ ವ್ಯಾಪ್ತಿಯ ಚೇಲಾವರ ಜಲಪಾತದಲ್ಲಿ ನಡೆದಿದೆ. ಮೂಲತಃ ಕೊಡಗಿನವರಾದ ಪ್ರಸ್ತುತ ಜೆ.ಪಿನಗರ ನಿವಾಸಿ ಕಾವೇರಪ್ಪ ಎಂಬವರ ಪುತ್ರ ದರ್ಶನ್ (೨೨) ಎಂಬಾತನೇ ಮೃತಪಟ್ಟ ದುರ್ದೈವಿ. ಈತ ಬೆಂಗಳೂರಿನ ಕೆಎಸ್‌ಐಪಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ನಾಲ್ವರು ಸ್ನೇಹಿತರೊಂದಿಗೆ ಮಡಿಕೇರಿ ದಸರಾ ವೀಕ್ಷಣೆಗೆಂದು ಶನಿವಾರ ತನ್ನ ಮಾವನ ಮನೆ ಸಿದ್ದಾಪುರಕ್ಕೆ ಆಗಮಿಸಿ ದಸರಾ ವೀಕ್ಷಿಸಿದ ಬಳಿಕ ಮಧ್ಯಾಹ್ನ ಒಂದು ಗಂಟೆಯ ಸಮಯಕ್ಕೆ ಚೇಲಾವರ ಜಲಪಾತ ವೀಕ್ಷಣೆಗೆಂದು ಸ್ನೇಹಿತರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ತೆರಳಿದ್ದರೆನ್ನಲಾಗಿದೆ. ಈ ಸಂದರ್ಭ ದರ್ಶನ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜಲಪಾತದಲ್ಲಿ ನೀರಿನ ರಭಸ ಹೆಚ್ಚಿದ್ದು ಆತನ ಶವ ಹೊರತೆಗೆಯಲು ಸಾಧ್ಯವಾಗಿಲ್ಲ. ನಾಪೋಕ್ಲು ಠಾಣಾಧಿಕಾರಿ ನಂಜುಂಡಸ್ವಾಮಿ ಸಿಬ್ಬಂದಿಗಳು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ಚೇಲಾವರ ಜಲಪಾತದಲ್ಲಿ ಆಕಸ್ಮಿಕವಾಗಿ ದುರಂತಕ್ಕೀಡಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲದಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದು ಈ ವ್ಯಾಪ್ತಿಯಲ್ಲಿ ಮಳೆಯಾಗಿ ನೀರಿನ ರಭಸ ಹೆಚ್ಚಿರುವುದರಿಂದ ಶವ ತೆಗೆಯಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮದ ಮುಳುಗು ತಜ್ಞ ಬಾಚಮಂಡ ತಿಲಕ್ ತಿಳಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *