ಟಿಪ್ಪು ಜಯಂತಿಗೆ ವಿರೋಧ

Posted on: October 13, 2017

images (2)ಮಡಿಕೇರಿ:- ಕೊಡಗಿನಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲು ವಿರೋಧ ವ್ಯಕ್ತಪಡಿಸಿ ಜಿ.ಪಂ. ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಯಾರ ಸಹಮತವೂ ಇಲ್ಲ. ಆದರೂ ಸಹ ಟಿಪ್ಪು ಜಯಂತಿಯನ್ನು ಆಚರಿಸುವ ಮೂಲಕ ಟಿಪ್ಪು ಜಯಂತಿಗೆ ವಿರೋಧ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ ಎಂದು ಬಿ.ಜೆ.ಪಿ. ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಾರಿ ಯಾವದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಣೆ ಮಾಡಬಾರದು ಎಂಬ ನಿರ್ಣಯ ಅಂಗೀಕರಿಸುವಂತೆ ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್‍ನ ಕೆಲವು ಸದಸ್ಯರು ವಿರೋಧಿಸಿದರಾದರೂ ಕಾಂಗ್ರೆಸ್‍ನ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಿಸಬಾರದೆಂದು ನಿರ್ಣಯ ಕೈಗೊಳ್ಳಲಾಯಿತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *