ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಧನುರ್ ಲಗ್ನ 12.33ಕ್ಕೆ ತೀರ್ಥರೂಪಿಯಾಗಿ ಹರಿದ ಕಾವೇರಿ

Posted on: October 17, 2017

19-1382159015-17-talakaveribrahmakundige-new-17-1508225473IMG_0164 (4)IMG_0164IMG_0177IMG_0123IMG_0129IMG_0134ಮಡಿಕೇರಿ:- ಕರ್ನಾಟಕದ ಸ್ವರ್ಣ ನದಿ ಎಂದೇ ಕರೆಯಲ್ಪಡುವ ಕಾವೇರಿಯ ಉದ್ಭವ ಕ್ಷೇತ್ರವಾದ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 12.33ಕ್ಕೆ ಧನುರ್ ಲಗ್ನದಲ್ಲಿ ತೀರ್ಥೋದ್ಭವ. ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಪವಿತ್ರ ಬ್ರಹ್ಮ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಹರಿದು ಬಂದ ಕಾವೇರಿಯ ದರ್ಶನಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬ್ರಹ್ಮಕುಂಡಿಕೆಯಿಂದ ಚಿಮ್ಮಿದ ಪುಣ್ಯ ಜಲವನ್ನು ಕೊಡ, ಕ್ಯಾನ್, ಡಬ್ಬಿಗಳಲ್ಲಿ ಸಂಗ್ರಹಿಸಲು ಭಕ್ತಾದಿಗಳು ಮುಗಿಬಿದ್ದರು. ಇದರ ಬೆನ್ನಲ್ಲೇ ಸಾಂಪ್ರದಾಯಿಕ ವಿಧಿ ವಿಧಾನಗಳು, ಪೂಜೆಗಳು ಆರಂಭಗೊಂಡಿದೆ. ಶ್ರೀ ಕಾವೇರಿ ಮಾತೆಗೆ ಪೂಜಾದಿ ಕೈಂಕರ್ಯವನ್ನು ಕ್ಷೇತ್ರದ ಅರ್ಚಕ ಕುಟುಂಬದ ರಾಮಕೃಷ್ಣಾಚಾರ್ ನೇತೃತ್ವದಲ್ಲಿ ನಡೆಯುತ್ತಿವೆ.

ಇದೇ ವೇಳೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತಾದಿಗಳ ಪುಣ್ಯ ಸ್ನಾನ ಮಾಡಿದರು. ಉತ್ಸವದ ಸಂದರ್ಭ ಭಕ್ತರ ಕೇಶ ಮುಂಡನಕ್ಕೆ ನೂತನವಾಗಿ ನಿರ್ಮಿಸಲಾದ ಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಾವೇರಿ-ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ಸಂಗಮ ಸ್ಥಳವಾದ ಭಾಗಮಂಡಲ, ತಲಕಾವೇರಿಯಲ್ಲಿ ಪಿಂಡ ಪ್ರದಾನಕ್ಕೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ತುಲಾಮಾಸದಲ್ಲಿ ಒಂದು ತಿಂಗಳ ಕಾಲ ಕಾವೇರಿ ಮಾತೆಗೆ ಚಿನ್ನದ ಆಭರಣಗಳನ್ನು ತೊಡಿಸಲಾಗುತ್ತದೆ. 1 ತಿಂಗಳು ಕಳೆದ ತರುವಾಯ ಅಂದರೆ ನವೆಂಬರ್ 17ರಂದು ಮರಳಿ ಚಿನ್ನಾಭರಣಗಳನ್ನು ದೇವಳದ ಆಡಳಿತಾಧಿಕಾರಿಗೆ ಹಿಂತಿರುಗಿಸಲಾಗುತ್ತದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *