ಸಣ್ಣಪುಲಿಕೋಟುವಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ

Posted on: October 11, 2017

Z SHIBIRA 1 Z SHIBIRA 2 Z SHIBIRA 3
ಮಡಿಕೇರಿ :-  ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಅರುಣ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ೨೦೧೭-೧೮ ನೇ ಸಾಲಿನ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಸಣ್ಣಪುಲಿಕೋಟುವಿನ ಮೇಲುಕಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ವಿದ್ಯಾರ್ಥಿಗಳು ಎಂಬ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎ.ಶ್ರೀಪ್ರಕಾಶ್ ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಸಾಮಾಜಿಕ ಕಳಕಳಿಯನ್ನು ಕೂಡ ತೋರಬೇಕೆಂದರು.
ವಿಶೇಷ ಆಹ್ವಾನಿತರಾಗಿ ವಿಜಯಲಕ್ಷ್ಮೀ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕುಯ್ಯಮುಡಿ ಅಶ್ವಿನಿ ಕುಮಾರ್, ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕ್ಷೇತ್ರದ ಜಿ. ಪಂ. ಸದಸ್ಯರಾದ ಕವಿತಾ ಪ್ರಭಾಕರ್, ಮಾಜಿ ಗ್ರಾ.ಪಂ. ಅಧ್ಯಕ್ಷರಾದ ಆಚೀರ ನಾಣಯ್ಯ, ಅಯ್ಯಂಗೇರಿ ಗ್ರಾ. ಪಂ. ಉಪಾಧ್ಯಕ್ಷರಾದ ಪುಷ್ಪ, ಸದಸ್ಯರುಗಳಾದ ಸುಮಿತ್ರ, ಕುಯ್ಯಮುಡಿ ಮನೋಜ್ ಕುಮಾರ್, ಪಿ.ಡಿ.ಒ ಅಶೋಕ್ ಕುಮಾರ್, ತಾಲೂಕು ಪಂ. ಸದಸ್ಯರಾದ ಸಂಧ್ಯ, ಅರುಣ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಎನ್. ಮಹದೇವು, ಮೇಲುಕಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮತ್ತಿತರ ಪ್ರಮುಖರು ಹಾಜರಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *