ಹಿಂದೂ ಸಾಮಾಜಿಕ ಕಾರ್ಯಕರ್ತರ ಹತ್ಯೆಗೆ ಖಂಡನೆ ನಗರದಲ್ಲಿ ವಿಎಚ್‌ಪಿ ಪ್ರತಿಭಟನೆ

Posted on: October 12, 2017

mdk-mdk11jay1ಮಡಿಕೇರಿ: ರಾಜ್ಯದಲ್ಲಿ ಹಿಂದೂ ಸಾಮಾಜಿಕ ಕಾರ್ಯಕರ್ತರ ಹತ್ಯೆ ಮತ್ತು ಹಿಂದೂ ಚಳವಳಿಯನ್ನು ಹತ್ತಿಕ್ಕುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.

ನಗರದಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸರಕಾರದ ವಿರುದ್ಧ ಅಕ್ರೋಶ ವ್ಯಕ್ತ ಪಡಿಸಿದರು. ನಂತರ ಜಿಲ್ಲಾಧಿಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಮಾಯಿಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್‌ನ ಕಾರ್ಯದರ್ಶಿ ಡಿ.ನರಸಿಂಹ ಮಾತನಾಡಿ, ರಾಜ್ಯ ಸರಕಾರ ನೀಡುತ್ತಿರುವ ಶಾದಿ ಭಾಗ್ಯ, ಅನ್ನ ಭಾಗ್ಯ, ಕ್ಷೀರ ಭಾಗ್ಯ ಎಂಬಂತೆ ಇಂದು ರಾಜ್ಯಕ್ಕೆ ಹಿಂದೂಗಳನ್ನು ಹತ್ಯೆ ಮಾಡುವ ಕೊಲೆ ಭಾಗ್ಯವನ್ನು ನೀಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರಕಾರ ಉದ್ದೇಶ ಪೂರ್ವಕವಾಗಿ ಬಹುಸಂಖ್ಯಾತ ಹಿಂದೂಗಳ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಿಗೆ ಅಡ್ಡಿಯನ್ನು ಮಾಡುತ್ತ ನಿರ್ಬಂಧ ಹೇರುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರು ಒಗ್ಗೂಡಿ ಜಾಗೃತರಾಗುವುದರೊಂದಿಗೆ ನಾವು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ನಮ್ಮದೇ ಆದ ಸಾಮ್ರಾಜ್ಯ ಕಟ್ಟುವಂತಾಗಬೇಕು ಎಂದು ಹೇಳಿದರು.

ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಶಾಲಪ್ಪ ಮಾತನಾಡಿ, ಹಿಂದೂ ಸಾಮಾಜಿಕ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯ ನಡೆಸುವ ರಾಜ್ಯ ಸರಕಾರ, ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿ ಹಿಂದೂಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿರುವ ಕರಾಳ ಕೃತ್ಯದಲ್ಲಿ ಸರಕಾರ ಭಾಗಿಯಾಗಿ ಅಧಿಧಿಕಾರಿ ಹಾಗೂ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಬಹುಸಂಖ್ಯಾತ ಹಿಂದೂಗಳ ಸಾಮಾಜಿಕ, ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುವ ಯತ್ನಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು, ಸರಕಾರ ಹಾಗೂ ಅಧಿಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಿಂದೂ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಿಂದು ಚಳವಳಿಯನ್ನು ಹತ್ತಿಕ್ಕುತ್ತಿರುವ ರಾಜ್ಯ ಸರಕಾರದ ಅತಿರೇಕದ ವರ್ತನೆ ವಿರುದ್ಧ ತನಿಖೆಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಅಜಿತ್‌, ಬಜರಂಗದದಳದ ಸಹ ಸಂಚಾಲಕ ಚೇತನ್‌, ಬಿಜೆಪಿ ನಗರಾಧ್ಯಕ್ಷ ಮಹೇಶ್‌ ಜೈನಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್‌, ಸಾರ್ವಜನಿಕ ಹಿತರಕ್ಷ ಣಾ ಸಮಿತಿ ಅಧ್ಯಕ್ಷ ಪ್ರಸನ್ನಭಟ್‌, ಪ್ರಮುಖರಾದ ನಂದೀಶ್‌ ಕುಮಾರ್‌, ಅರುಣ್‌ಕುಮಾರ್‌, ಸೇರಿದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *