ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ರಮಾನಾಥ ರೈ

Posted on: November 17, 2017

ಮಡಿಕೇರಿ:-ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ವಿಧಾನ ಪರಿಷತ್‌ನಲ್ಲಿ ಮಾಹಿತಿ ಪಡೆದಿದ್ದಾರೆ. ಶಾಶ್ವತವಾಗಿ ಕಾಡಾನೆ ಹಾವಳಿ ನಿಯಂತ್ರಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ಸಚಿವರಾದ ರಮಾನಾಥ ರೈ ಅವರು ಕೊಡಗು ವೃತ್ತ ವ್ಯಾಪ್ತಿಯ ಕುಶಾಲನಗರ ವಲಯದ ಚಿಕ್ಲಿಹೊಳೆ ಹಿನ್ನೀರು ಪ್ರದೇಶದಲ್ಲಿ ೫ ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ತಾಂತ್ರಿಕ ಪ್ರಕ್ರಿಯೆ ನಂತರ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ವಿರಾಜಪೇಟೆ ವಿಭಾಗದಲ್ಲಿ ೨.೭೩ ಕಿ.ಮೀ. ಕಾಮಗಾರಿ ಕೈಗೊಳ್ಳಲು ವಾರ್ಷಿಕ ಕ್ರೀಯಾಯೋಜನೆಯಲ್ಲಿ ಅಳವಡಿಸಲಾಗಿದ್ದು, ತಾಂತ್ರಿಕ ಪರಿಶೀಲನೆಯ ನಂತರ ಟೆಂಡರ್ ಪ್ರಕ್ರಿಯೆ ಕೈಗೊಂಡು ಅನುಷ್ಠಾನಗೊಳಿಸಲಾಗುವುದು. ಹಾಗೆಯೇ ವನ್ಯಜೀವಿ ವಿಭಾಗದಲ್ಲಿ ೭೧೫ ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲು ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ಅವರು ಮಾಹಿತಿ ನೀಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *