ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಸನ್ಮಾನ

Posted on: November 17, 2017

DSC01383 DSC01406 DSC01418
ಮಡಿಕೇರಿ:-ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ನಗರ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ೬೪ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರಾಭಿವೃದ್ಧಿಗೆ ಶಾಸನವನ್ನು ಸಶಕ್ತಗೊಳಿಸುವ ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳದ ಉಪಾಧ್ಯಕ್ಷರು ಹಾಗೂ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಅಧ್ಯಕ್ಷರಾದ ಎಂ.ಬಿ.ದೇವಯ್ಯ ಅವರು ಕೊಡಗು ಜಿಲ್ಲೆಯ ಸಹಕಾರ ಸಂಸ್ಥೆಗಳು ಶೇ.೯೦ ರಿಂದ ೯೫ ರಷ್ಟು ಉತ್ತಮವಾಗಿ ಕಾರ್ಯನಿರ್ವಸುತ್ತಿವೆ. ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಸಹಕಾರ ರತ್ನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸಿದಾಗ ಅವ್ಯವಹಾರಗಳು ನಡೆಯದಂತೆ ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಎ.ಕೆ.ಮನು ಮುತ್ತಪ್ಪ ಅವರು ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಕೊಡಗಿನವರು ಅನೇಕರು ದುಡಿದಿದ್ದಾರೆ. ಕೊಡಗು ಸಹಕಾರ ಕ್ಷೇತ್ರದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯ ಬಹುತೇಕ ಸಹಕಾರ ಸಂಸ್ಥೆಗಳು ಲಾಭಾಂಶದಲ್ಲಿ ನಡೆಯುತ್ತಿವೆ ಎಂದು ಹೇಳಿದರು.
ಕರ್ನಾಟಕ ಇನ್ಸ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲರಾದ ಆರ್.ಎಸ್.ರೇಣುಕ ಅವರು ಮಾತನಾಡಿ ಉತ್ತಮ ಆಡಳಿತದಲ್ಲಿ ಪಾರದರ್ಶಕತೆ, ನ್ಯಾಯಪರತೆ, ಪ್ರಜಾಪ್ರಭುತ್ವ ವ್ಯವಸ್ಥೆ ಮೊದಲಾದವು ಅಗತ್ಯವೆನಿಸಿದ್ದು, ಅವು ವಾಸ್ತವಿಕವಾಗಿ ಸಹಕಾರ ತತ್ವದೊಂದಿಗೆ ಬೆಸೆದುಕೊಂಡಿರುತ್ತವೆ. ಸಹಕಾರಿ ಆಡಳಿತ ಕಾರ್ಪೋರೇಟ್ ಆಡಳಿತದಿಂದ ವಿಭಿನ್ನವಾದುದು. ಸಹಕಾರಿ ಆಡಳಿತ ಸಂಘದ ಸದಸ್ಯರಿಗೆ ಉತ್ತರದಾಯಿಯಾಗಿದೆ ಎಂದರು.
ಆಡಳಿತ ಮಂಡಳಿ ನೀತಿ ನಿರೂಪಣೆ ಮಾಡುವಲ್ಲಿ, ಸಿಬ್ಬಂದಿ ಅಂತಹ ನೀತಿಯನ್ನು ಜಾರಿಗೊಳಿಸುವಲ್ಲಿ ಬದ್ಧರಾಗಿರಬೇಕು. ಸಹಕಾರ ಕ್ಷೇತ್ರ ಅಭಿವೃದ್ಧಿಗೊಳಿಸಿ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗಬೇಕು. ೧೯೪೨ ರಲ್ಲಿ ಬಹುಘಟಕ ಸಹಕಾರ ಸಂಘಗಳ ಕಾಯ್ದೆ ಜಾರಿಯಾಗಿ ಹಲವಾರು ರಾಷ್ಟ್ರೀಯ ಮಹಾಮಂಡಳಿ ಅಸ್ತಿತ್ವಕ್ಕೆ ಬಂದವು. ಮುಂದೆ ಇದೇ ಬಹುರಾಜ್ಯ ಸಹಕಾರ ಸಂಘಗಳ ಕಾಯ್ದೆಯಾಗಿ ೧೯೮೪ರಲ್ಲಿ ಜಾರಿಗೆ ಬಂದದ್ದು ವಿಶೇಷವಾಗಿದೆ. ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯೇ ಸಹಕಾರ ವ್ಯವಸ್ಥೆಯ ಜೀವಾಳ. ಸಹಕಾರ ರಾಜ್ಯಗಳ ವಿಷಯವಾಗಿದ್ದು, ಸಂವಿಧಾನದ ೯೭ನೇ ತಿದ್ದುಪಡಿಯಿಂದಾಗಿ ರಾಷ್ಟ್ರದಾದ್ಯಂತ ಏಕರೂಪ ಆಡಳಿತಕ್ಕೆ ಸಂಬಂಧಿಸಿದಂತೆ, ಕಾನೂನು ನಿಯಮಗಳ ರಚನೆಯಾಗಿದೆ. ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರ ಸಂಖ್ಯೆಯನ್ನು ೨೧ ಕ್ಕೆ ಸೀಮಿತಗೊಳಿಸಲಾಗಿದೆ. ಅಬಲ ವರ್ಗಕ್ಕೆ ಆದ್ಯತೆಯ ಮೇಲೆ ಅವಕಾಶಗಳನ್ನು ಕಲ್ಪಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರೂ ಸಹಕಾರಿ ಪ್ರಯತ್ನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬಲ್ಲಡಿಚಂಡ ಬಿ.ನಾಣಯ್ಯ ಅವರಿಗೆ ಕೊಡಗು ಸಹಕಾರ ರತ್ನ ಹಾಗೂ ಮಾತಂಡ ಎ.ರಮೇಶ್, ಎ.ವಿ.ಶಾಂತಕುಮಾರ್, ಮುಕ್ಕಾಟಿರ ಪ್ರೇಮ ಸೋಮಯ್ಯ ಅವರಿಗೆ ಶ್ರೇಷ್ಠ ಸಹಕಾರಿಗಳು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಎಸ್.ಪಿ.ನಿಂಗಪ್ಪ, ಯೋಗೇಂದ್ರ ನಾಯಕ್ ಇತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *