ಚಲಿಸುತ್ತಿದ್ದ ಬಸ್ ಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ

Posted on: December 5, 2017

bus-accident

ಚಲಿಸುತ್ತಿದ್ದ ಬಸ್ ಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಹಾಸನ ನಗರದ ನೂತನ ಬಸ್ ನಿಲ್ದಾಣದ ಬಳಿ ನಡೆದಿದೆ.

ಇಲ್ಲಿರುವಂತಹ ಸಿಸಿಟಿವಿ ಪರಿಶೀಲಿಸಿದಾಗ ವ್ಯಕ್ತಿ ಚಲಿಸುತ್ತಿದ್ದ ಬಸ್ ನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸಿಸಿಟಿವಿ ಪರಿಶೀಲನೆಗೆ ಮೊದಲು ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಮೃತ ವ್ಯಕ್ತಿಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿ. ಶವವನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿಡಲಾಗಿದೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *