ಬಂಗಾಳಕೊಲ್ಲಿಯಲ್ಲಿ ಮುಂದಿನ 24 ತಾಸಿನಲ್ಲಿ ಮತ್ತೆ ವಾಯುಭಾರ ಕುಸಿತ

Posted on: December 5, 2017

575788‘ಒಖಿ’ ಚಂಡಮಾರುತ ತಮಿಳುನಾಡು ಹಾಗೂ ಕೇರಳ, ಲಕ್ಷದ್ವೀಪ, ಕರ್ನಾಟಕದ ಕರಾವಳಿಗಳಿಗೆ ಅಪ್ಪಳಿಸಿ ಹಾನಿ ಮಾಡಿ ಮುಂದೆ ಸಾಗುತ್ತಿದೆ. ಇದರ ಬೆನ್ನಲ್ಲೆ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪರಿಸ್ಥಿತಿ ಇದ್ದು, ವಾಯಭಾರ ಕುಸಿತ ಮುಂದುರೆಯಲಿದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಅದು ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಕುಸಿದು ತೀವ್ರತೆ ಪಡೆದುಕೊಳ್ಳಲಿದೆ ಎಂದು ಕೇಂದ್ರ ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಡಾ.ಹರ್ಷವರ್ದನ ಅವರು  ಟ್ವೀಟ್‌ ಮಾಡಿದ್ದಾರೆ.

ತೀವ್ರ ಕುಸಿತದೊಂದಿಗೆ ಮಾರುತವು ಮುಂದಿನ ಮೂರು ದಿನಗಳಲ್ಲಿ ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರದತ್ತ ಸಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *