ಎತ್ತಿನ ಗಾಡಿಗೆ ಬಸ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು

Posted on: January 3, 2018

MANDYA

ಎತ್ತಿನ ಗಾಡಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತಿನಗಾಡಿ ಮಗುಚಿ ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗ್ರಾಮದ 40 ವರ್ಷದ ಜವನಮ್ಮ ಮೃತ ದುರ್ದೈವಿ. ಘಟನೆಯಲ್ಲಿ ಶಂಕರ್ ಎಂಬುವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ವೇಳೆ ಎತ್ತುಗಳು ಕೂಡ ಗಾಯಗೊಂಡಿವೆ. ಕೆಲಸಕ್ಕೆಂದು ಜಮೀನಿಗೆ ಹೋಗುತ್ತಿದ್ದ ಎತ್ತಿನಗಾಡಿಯ ನೊಗಕ್ಕೆ ಖಾಸಗಿ ಬಸ್ ತಾಗಿದ್ದು, ಇದರಿಂದ ಎತ್ತಿನಗಾಡಿ ಮಗುಚಿ ಬಿದ್ದಿದೆ.

ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *