ಕರಾವಳಿಯಲ್ಲಿ ಮತ್ತೆ ರಕ್ತಪಾತ ಹಾಡಹಗಲೇ ಯುವಕನ ಬರ್ಬರ ಹತ್ಯೆ ನಾಲ್ವರು ಆರೋಪಿಗಳು ಪೋಲೀಸರ ವಶಕ್ಕೆ

Posted on: January 4, 2018

deepk

ಮಂಗಳೂರು : ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಯುವಕನನ್ನು ಹಾಡಹಗಲೇ ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ದೀಪಕ್(32) ಎಂದು ಗುರುತಿಸಲಾಗಿದೆ. ಈತ ಮೊಬೈಲ್ ಕಂಪೆನಿಯಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ದೀಪಕ್ ನನ್ನು ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

deepak2

ಆರೋಪಿಗಳನ್ನು ಸುರತ್ಕಲ್ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ನಾಲ್ಕು ಆರೋಪಿಗಳನ್ನು ಫೈರಿಂಗ್ ಮಾಡಿ ವಶಕ್ಕೆ ಪಡೆದಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *