ಕಾರ್ತಿಕ್ ಚಿದಂಬರಂಗೆ ಮತ್ತೆ ಶಾಕ್ ನೀಡಿದ ಇಡಿ ಆಪ್ತರ ಮನೆ ಮೇಲೂ ದಾಳಿ

Posted on: January 13, 2018

Karthikಚೆನ್ನೈ : ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಬೆಳಿಗ್ಗೆ ಶಾಕ್ ನೀಡಿದೆ. ಕಾರ್ತಿ ಚಿದಂಬರಂ ಅವರ ಚೆನ್ನೈ ಹಾಗೂ ದೆಹಲಿ ಮನೆ ಮೇಲೆ ದಾಳಿ ನಡೆಸಿರುವ ಇಡಿ ತಂಡ ಕಾರ್ತಿ ಅವರ ಆಪ್ತರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಕಾರ್ತಿ ಅವರಿಗೆ ಸೇರಿದ ಕಚೇರಿಗಳ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಏರ್ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಹಿಂದೆಯೂ ಸಿಬಿಐ ಮತ್ತು ಇಡಿ ಏರ್ಸೆಲ್ ಮ್ಯಾಕ್ಸಿಸ್ ಹಗರಣದ ಕುರಿತು ಕಾರ್ತಿ ಅವರನ್ನು ಸತತ ವಿಚಾರಣೆಗೆ ಒಳಪಡಿಸಿತ್ತು.
ಏರ್ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಾಯವು (ಇಡಿ) ಈ ಹಿಂದೆ ಕಾರ್ತಿ ಅವರಿಗೆ ಸೇರಿದ ಬ್ಯಾಂಕ್ ಖಾತೆ ಮತ್ತು ಎಪ್‌ಡಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *