ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

Posted on: January 6, 2018

SUCIDEE R

ವಿದ್ಯಾರ್ಥಿನಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಸಿಂದನೂರು ತಾಲೂಕಿನ ಆರ್.ಹೆಚ್. ನಂ.3 ಕ್ಯಾಂಪಿನಲ್ಲಿ ಈ ಘಟನೆ ನಡೆದಿದೆ . ಶೃತಿ (17) ನೇಣು ಹಾಕಿಕೊಂಡ ವಿದ್ಯಾರ್ಥಿನಿ. ಈಕೆ ಸಿಂದನೂರಿನ ಖಾಸಗೀ ಕಾಲೇಜಿನ ವಿದ್ಯಾಬ್ಯಾಸ ಮಾಡುತ್ತಿದ್ದಳು.

ಮಧ್ಯ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಕುರಿತು ಇನ್ನೂ ಮಾಹಿತಿ ಲಬ್ಯವಾಗಿಲ್ಲ ಎಂದು ಪೋಲಿಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *