ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಸ್ವಾಮಿಜಿ

Posted on: January 8, 2018

swamiji death

ಹುಲ್ಲತ್ತಿ ದಿಂಗಾಲೇಶ್ವರ ಶಾಖಾ ಮಠದ ಸ್ವಾಮೀಜಿಯೊಬ್ಬರು ಮಠದಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ.

38 ವರ್ಷದ ಮಹಾಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ. ಇವರು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಲೇಹೊಸೂರಿನ ದಿಂಗಾಲೇಶ್ವರ ಮಠದ ಶಾಖಾ ಮಠ ಸ್ವಾಮೀಜಿ.

ಕಳೆದ ಕೆಲವು ತಿಂಗಳಿನಿಂದ ಮಠದಲ್ಲಿ ವಾಸವಾಗಿದ್ದ ಸ್ವಾಮೀಜಿ ರಾತ್ರಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಸ್ಥರು ಮುಂಜಾನೆ ಮಠಕ್ಕೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್ ನೋಟ್ ನಲ್ಲಿ ಏನಿದೆ:

ಪೂಜ್ಯ ಗುರುಗಳೇ ಮತ್ತು ನನ್ನ ಬಂಧುಬಾಂದವರೇ ಹಾಗೂ ನನ್ನ ಮಿತ್ರರೇ, ನನ್ನ ಸಾವಿಗೆ ನಾನೇ ಕಾರಣ ಯಾರು ಹೊಣೆಗಾರರಲ್ಲ. ನನಗೆ ಮನಃಶಾಂತಿ ಇಲ್ಲ. ಅದಕ್ಕೆ ಮನಃಶಾಂತಿಗೋಸ್ಕರ ನಾನು ಆತ್ಮಹತ್ಯೆ ಮಾಡಿಕೊಂಡಿದ್ದೇವೆ. ನನ್ನ ಸಮಾಧಿ ಇದೇ ಮಠದಲ್ಲಿ ಮಾಡಿ. ಇದು ನನ್ನ ಕೊನೆಯ ಆಸೆ. ನಾನು ಯಾವ ಭಕ್ತರಿಗೂ ಕೆಟ್ಟದನ್ನು ಮಾಡಿರಲಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿಕೊಳ್ಳುತ್ತಿದ್ದೇನೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *