ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಕತ್ತು ಕುಯ್ದು ಕೊಂದೆ ಬಿಟ್ಟ

Posted on: January 6, 2018

maravathi

ಪತ್ನಿಯ ಶೀಲದ ಮೇಲೆ ಅನುಮಾನ ಪಟ್ಟು ಆಕೆಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಸಂಧ್ಯಾ(27) ಕೊಲೆಯಾದ ಮಹಿಳೆ. ಈ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿ ನಡೆದಿದೆ. ಕೊಲೆ ಮಾಡಿದ ಪತಿ ವಂಶಿ ಪರಾರಿಯಾಗಿದ್ದಾನೆ. ಇವರಿಬ್ಬರು ಆರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ವೃತ್ತಿಯಲ್ಲಿ ಇಬ್ಬರು ಶಿಕ್ಷಕರಾಗಿದ್ದು, ಬೆಂಗಳೂರಿನ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹಲವು ಬಾರೀ ಇವರಿಬ್ಬರು ಜಗಳವಾಡಿದ್ದು ಇವರಿಬ್ಬರ ಜಗಳ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆನೇಕ ಬಾರೀ ಗ್ರಾಮಸ್ಥರು, ಪೊಲೀಸರು ಸೇರಿ ಬುದ್ಧಿವಾದ ಹೇಳಿದ್ದರು.

ನಂತರದ ದಿನಗಳಲ್ಲಿ ಇವರಿಬ್ಬರು ಒಟ್ಟಾಗಿ ಒಂದೇ ಶಾಲೆಗೆ ಶಿಕ್ಷಕರಾಗಿ ಕೆಲಸ ಮಾಡಲು ಹೋಗುತ್ತಿದ್ದರು. ಆದರೆ ಈಚೆಗೆ ವಂಶಿ ಮತ್ತೇ ಹೆಂಡತಿ ಜತೆ ಬೇರೆಯವರ ಜತೆ ಸಂಬಂಧ ಿದೆ ಎಂದು ಕ್ಯಾತೆ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ವಂಶಿ ಪತ್ನಿ ಸಂಧ್ಯಾಳ ಕತ್ತು ಕುಯ್ದು ಕೊಂದು ಪರಾರಿಯಾಗಿದ್ದಾನೆ.

ಸ್ಥಳೀಯರು ಇವರ ಮನೆಯಲ್ಲಿ ಯಾವುದೇ ಚಲನವಲನ ಇಲ್ಲದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *