ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವರಿಷ್ಠರ ನಿರೀಕ್ಷೆಯಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ ಅಪ್ರು ರವೀಂದ್ರ  

Posted on: January 12, 2018

 

177

ಮಡಿಕೇರಿ :  ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯ ಮೂಲಕ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿದ ನನ್ನ ಸೇವೆಯನ್ನು ಗಮನಿಸಿ ಪಕ್ಷದ ವರಿಷ್ಠರು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ್ದು, ಇದಕ್ಕೆ ನಾನು ಆಬಾರಿಯಾಗಿದ್ದೇನೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೆ ನನಗೆ ದೊಡ್ಡ ಜವಬ್ದಾರಿಯೊಂದನ್ನು ಪಕ್ಷ ನೀಡಿದ್ದು, ವರಿಷ್ಠರ ನಿರೀಕ್ಷೆಯಂತೆ ಕಾರ್ಯ ನಿರ್ವಹಿಸುವ ಮೂಲಕ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಅಗತ್ಯವಿರುವ ಚಟುವಟಿಕೆಗಳಿಗೆ ಸಧ್ಯದಲ್ಲಿಯೇ ಚಾಲನೆ ನೀಡಲಿದ್ದೇನೆ. ಇದೇ ರೀತಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಗತ್ಯ ಸಹಕಾರ ನೀಡಲಿದೆ.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಇತರ ಪಕ್ಷಗಳ ಕಾರ್ಯಕರ್ತರು ಕೂಡ ಕಾಂಗ್ರೆಸ್ ಪಕ್ಷವನ್ನು ಸೇರಲು ಕಾತುರರಾಗಿದ್ದು, ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿಗೆ ಆಗಮಿಸಿ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ತುಂಬಿದ್ದಾರೆ. ಈ ಬಾರಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲುವುದು ನಿಶ್ಚಿತವಾಗಿದೆ

ಬಿಜೆಪಿಯ ಹಿಡಿತದಲ್ಲಿರುವ ಕೊಡಗನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಮಾರ್ಪಾಡು ಮಾಡುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಚಟುವಟಿಕೆ ಆರಂಭಗೊಂಡಿದೆ.

21 ಪಂಚಾಯಿತಿಗಳು, ಒಂದು ನಗರಸಭೆ ಹಾಗೂ 136 ಬೂತ್‍ಗಳನ್ನೊಳಗೊಂಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ್ನು ಮತ್ತಷ್ಟು ಬಲಪಡಿಸಲು ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದೆ. ಪಕ್ಷದ ಜಿಲ್ಲಾ ನಾಯಕರು ಹಾಗೂ ರಾಜ್ಯ ವರಿಷ್ಠರು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಅಗತ್ಯ ಸಹಕಾರವನ್ನು ನೀಡುತ್ತಿದ್ದು, ಕಾರ್ಯಕರ್ತರು ಕೂಡ ಹೆಚ್ಚು ಚಟುವಟಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಆಗಮನದ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಜನಾಭಿಪ್ರಾಯ ಕೇಳಿ ಬರುತ್ತಿದ್ದು, ಬಿಜೆಪಿ ಆತಂಕಗೊಂಡಿದೆ. ಇದೇ ಕಾರಣಕ್ಕೆ ಯಾವುದೇ ವಿಚಾರಧಾರೆಗಳಿಲ್ಲದ ಬಿಜೆಪಿ ಮಂದಿ ಅಭಿವೃದ್ಧಿಪರ ಚಿಂತನೆಗಳನ್ನು ಮಾಡದೆ ಟಿಪ್ಪು ಜಯಂತಿ ವಿಚಾರವನ್ನೇ ಪ್ರಸ್ತಾಪ ಮಾಡುತ್ತಾ ಕಾಂಗ್ರೆಸ್ ಸರಕಾರವನ್ನು, ಮುಖ್ಯಮಂತ್ರಿಗಳನ್ನು ಟೀಕಿಸುವ ರಾಜಕಾರಣವನ್ನಷ್ಟೇ ಮಾಡುತ್ತಿದ್ದಾರೆ. ಬಿಜೆಪಿ ಅಶಾಂತಿ ಮೂಡಿಸಿ ಮತಗಳಿಕೆಯ ಭ್ರಮೆಯಲ್ಲಿದೆ, ಆದರೆ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಹೃದಯವನ್ನು ಗೆದ್ದು ಮತ ಗಳಿಸುವ ವಿಶ್ವಾಸವನ್ನು ಹೊಂದಿದೆ. ಜನಪರವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಬಡವರ ಹಸಿವು ನೀಗಿಸುವ ಮಹತ್ಕಾರ್ಯ ಮಾಡಿದ್ದು, ಹಸಿವು ಮುಕ್ತ ಕರ್ನಾಟಕವನ್ನು ರಚಿಸಿ ದೇಶದ ಗಮನ ಸೆಳೆದಿದೆ.

ಜನಸಾಮಾನ್ಯರ ಮತ್ತು ಎಲ್ಲಾ ಸಮುದಾಯದ ಜನರು ಒಪ್ಪಿಕೊಂಡಿರುವ ಸರಕಾರ ಇದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಎಲ್ಲಾ ಸುಳ್ಳು ಆರೋಪಗಳನ್ನು ಮೀರಿ ಐದು ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ರಚನೆಯಾಗುವುದಕ್ಕೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ತನ್ನದೇ ಆದ ಕೊಡುಗೆಯನ್ನು ನೀಡಲಿದೆ. ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದು ಅಪ್ರು ರವೀಂದ್ರ ಹೇಳಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *