ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಶಾಸಕರಿಂದ ‘ರೈತರ ಸಂತೆಗೆ’ ಚಾಲನೆ

Posted on: January 12, 2018

DSC02514
ಮಡಿಕೇರಿ  : ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ  ‘ರೈತರ ಸಂತೆ’ಗೆ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕೆ.ಜಿ.ಬೋಪಯ್ಯ ಅವರು ರೈತರು ಬೆಳೆದ ಬೆಳೆಗಳಿಗೆ ಮಾರಾಟ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಸಮಿತಿಯ ಆವರಣದಲ್ಲಿ ‘ರೈತರ ಸಂತೆ’ ಏರ್ಪಡಿಸಲಾಗಿದ್ದು, ಕೃಷಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ರೈತರು ಬೆಳೆದ ಪದಾರ್ಥಗಳಿಗೆ ಉತ್ತಮ ದರ ಸಿಗಬೇಕು. ಆ ನಿಟ್ಟಿನಲ್ಲಿ ಕೃಷಿಕರು ಮತ್ತು ಗ್ರಾಹಕರಿಗೆ ಅನುಕೂಲ ಮಾಡುವ ದಿಸೆಯಲ್ಲಿ ರೈತರ ಸಂತೆಗೆ ಚಾಲನೆ ದೊರೆತಿದೆ ಎಂದು ಕೆ.ಜಿ.ಬೋಪಯ್ಯ ಅವರು ನುಡಿದರು.

DSC02513

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ರೈತರ ಉತ್ಪನ್ನಗಳಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುವಂತೆ ಪ್ರಯತ್ನಿಸುವುದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಕೃಷಿಕರಿಗೆ ಅನುಕೂಲ ಮಾಡುವಲ್ಲಿ ರೈತರ ಸಂತೆ ಏರ್ಪಡಿಸಲಾಗಿದೆ ಎಂದರು.
ರೈತರು ಚಳಿ, ಮಳೆ, ಗಾಳಿ ಎನ್ನದೆ ಕಷ್ಟಪಟ್ಟು ದುಡಿದು ಕೃಷಿ ಉತ್ಪನ್ನ ಮಾಡುತ್ತಾರೆ. ಈ ರೀತಿ ಶ್ರಮಿಸಿದ ಬೆಳೆಗಳನ್ನು ಮಾರಾಟ ಮಾಡಿ ಅವುಗಳಿಗೆ ಸೂಕ್ತ ಬೆಲೆ ಪಡೆದಾಗ ಮಾತ್ರ ರೈತರಿಗೆ ಪ್ರಯೋಜನವಾಗಲಿದೆ ಎಂದರು.

DSC02512

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪನೆಗೂ ಮೊದಲು ಕೃಷಿ ಉತ್ಪನ್ನ ಮಾರಾಟ ವ್ಯವಸ್ಥೆಯ ಅನೇಕ ನ್ಯೂನ್ಯತೆಗಳು ಕಂಡು ಬಂದಿದ್ದವು, ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸುದಾರಣೆಗಳು ನಡೆದಿವೆ ಎಂದರು.

ಎಂ.ಪಿ.ಸುನಿಲ್ ಸುಬ್ರಮಣಿ ಅವರು ಮಾತನಾಡಿ ಕೃಷಿಕರಿಗೆ ಹೆಚ್ಚಿನ ಅನುಕೂಲ ಮಾಡುವಲ್ಲಿ ರೈತರ ಸಂತೆ ಏರ್ಪಡಿಸಲಾಗಿದೆ ಎಂದರು.
ಪ್ರತಿವಾರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೃಷಿಕರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ ಎಂದು ಸಮಿತಿಯ ಕಾರ್ಯದರ್ಶಿ ಕೆ.ವಿ.ಯೋಗಾನಂದ, ಅವರು ತಿಳಿಸಿದರು.

ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಸೋಭಾ ಮೋಹನ್, ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಸುವಿನ್ ಗಣಪತಿ, ಮಡಿಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಕಾಂಗೀರ ಸತೀಶ್, ಉಪಾಧ್ಯಕ್ಷರಾದ ಚೇನಂಡ ಗಿರೀಶ್ ಪೂಣಚ್ಚ, ಸದಸ್ಯರಾದ ಬೆಪ್ಪುರನ ಮೇದಪ್ಪ, ವಾಂಚಿರ ಜಯಾ ನಂಜಪ್ಪ, ಎನ್.ಸಿ.ಅನಂತ್, ನಿರ್ಮಲ ನಂಜಪ್ಪ, ಹೇಮಲತ, ಎ.ಬಿ.ತಮ್ಮಯ್ಯ, ಎಸ್.ಎಂ.ಕಾರ್ಯಪ್ಪ, ಕೆ.ಕೆ.ದೇವಪ್ಪ, ಡಿ.ಎನ್.ಅನಿಲ್ ಕುಮಾರ್, ಎನ್.ಕೆ.ಕುಟ್ಟಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪಿ.ಎಲ್.ಸುರೇಶ್, ಕೆ.ಯು.ಅಬ್ದುಲ್ ರಜಾಕ್, ಕಚೇರಿಯ ಲೆಕ್ಕಿಗರಾದ ರವಿಕುಮಾರ್ ಇತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *