ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸ್ವಾಮಿ ವಿವೇಕಾನಂದರು ಜಗತ್ತಿನ ತತ್ವಜ್ಞಾನಿ ಸುನಿಲ್ ಸುಬ್ರಮಣಿ

Posted on: January 12, 2018

DSC02507

ಮಡಿಕೇರಿ  : ಸ್ವಾಮಿ ವಿವೇಕಾನಂದರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ತತ್ವಜ್ಞಾನಿ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪದವಿ ಪೂರ್ವ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶುಕ್ರವಾರ ನಡೆದ ‘ಸ್ವಾಮಿ ವಿವೇಕಾನಂದರ’ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಮಹಾನ್ ದಾರ್ಶನಿಕ. ದೇಶಭಕ್ತಿ ಉಳ್ಳವರಾಗಿದ್ದರು. ಇವರ ಆದರ್ಶಗಳು ಬದುಕಿನ ಬಗ್ಗೆ ಯುವಜನರು ತಿಳಿದುಕೊಳ್ಳಬೇಕು ಎಂದರು.

DSC02508

ಯುವ ಜನತೆ ದೇಶದ ಭವಿಷ್ಯ ನಿರ್ಮಾಪಕರು, ಯುವ ಜನರಲ್ಲಿನ ಸುಪ್ತ ಪ್ರತಿಭೆ ಹಾಗೂ ಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಆ ದಿಸೆಯಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಕನಸಿನ ಭಾರತ ನಿರ್ಮಾಣದಲ್ಲಿ ಯುವ ಶಕ್ತಿಯ ಪಾತ್ರವನ್ನು ಅತ್ಯಂತ ಪ್ರಭಾವಯುತವಾಗಿ ಬಿಂಭಿಸಿದರು. ಯುವ ಜನತೆಗೆ ಸ್ವಾಮಿ ವಿವೇಕಾನಂದರೇ ಬಹುದೊಡ್ಡ ಸ್ಫೂರ್ತಿ ಹಾಗೂ ಆದರ್ಶ ಎಂದು ಸುನಿಲ್ ಸುಬ್ರಮಣಿ ಅವರು ಹೇಳಿದರು.

ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ಮಹಾನ್ ಚೇತನ ಸ್ವಾಮಿ ವಿವೇಕಾನಂದರ ಚಿಕಾಗೋದಲ್ಲಿನ ಭಾಷಣ ಮತ್ತು ಅವರು ನೀಡಿದ ಸಂದೇಶಗಳು ಸದಾ ಸ್ಮರಣೀಯ. ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ದೊಡ್ಡದು, ಸಿದ್ಧಾಂತ ವಿಶಾಲವಾದದ್ದು, ಪ್ರತಿಯೊಬ್ಬರು ಸಹೋದರತೆ, ಸಮನ್ವಯತೆ, ಸಮಗ್ರತೆ ಹಾಗೂ ಭಾತೃತ್ವದಿಂದ ಬದುಕು ನಡೆಸಬೇಕು ಎಂದು ಸಾರಿದ್ದರು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಪಿ.ಐಶ್ರೀವಿದ್ಯಾ ಅವರು ಮಾತನಾಡಿ ರಾಷ್ಟ್ರದ ಸಂಸ್ಕøತಿಯನ್ನು ವಿದೇಶಗಳಿಗೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದ ಅವರಿಗೆ ಸಲ್ಲುತ್ತದೆ. ಯುವಜನ ಉತ್ಸವವಾಗಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಬೇಕಿದೆ ಎಂದರು.

ಯುವಜನರಿಗೆ ಸ್ವಾಮಿ ವಿವೇಕಾನಂದ ಅವರು ಮಾದರಿ, ಯುವಜನರಲ್ಲಿ ಕನಸು ಇದ್ದಾಗ, ಅಭಿವೃದ್ಧಿ ಸಾಧಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವಕಂಡ ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದ ಸ್ವಾಮಿ ವಿವೇಕಾನಂದರು ಯುವ ಜನರಿಗೆ ಪ್ರೇರಕ. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಇವರ ಆದರ್ಶ ಗುಣಗಳು ಯುವಜನರಿಗೆ ಮಾದರಿ. ಆ ದಿಸೆಯಲ್ಲಿ ವಿದ್ಯಾರ್ಥಿಗಳು ಇರುವ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ರಾಷ್ಟ್ರಕ್ಕೆ ಮಾದರಿಯಾಗಿ ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಸ್ವಾಮಿ ವಿವೇಕಾಂದ ಜಯಂತಿಯನ್ನು ಯುವ ಜನರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಯುಜನರುಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಸ್ವಾಮಿ ವಿವೇಕಾನಂದರ ಬದುಕು-ಬರಹಗಳನ್ನು ಅಧ್ಯಯನ ಮಾಡಬೇಕು. ಇವರ ಬರಹಗಳನ್ನು ಓದುವುದರಿಂದ ಆತ್ಮವಿಶ್ವಾಸ ಉಂಟಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಚಿತ್ರ, ಇತರರು ಇದ್ದರು.

DSC02510

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *