ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅಂತರ್ಜಲ ಸಂರಕ್ಷಣೆ ಸದ್ಬಳಕೆ ಗುಣಮಟ್ಟ ನಿರ್ವಹಣೆ ಕುರಿತ ಕಾರ್ಯಾಗಾರ

Posted on: February 3, 2018

IMG-20180203-WA0009
ಮಡಿಕೇರಿ  : ಬೆಂಗಳೂರು ಅಂತರ್ಜಲ ನಿರ್ದೇಶನಾಲಯ, ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ ಇವರ ವತಿಯಿಂದ ಅಂತರ್ಜಲ ಸಂರಕ್ಷಣೆ, ಸದ್ಬಳಕೆ, ಮರು ಪೂರೈಕೆ, ಗುಣಮಟ್ಟ, ನಿರ್ವಹಣೆ ಹಾಗೂ ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳುವ ಅವಘಡಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೊಡಗು ಜಿಲ್ಲೆಯ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮೀಣ, ನಗರ ವ್ಯಾಪ್ತಿಯ ನೀರು ಸರಬರಾಜು ಎಂಜಿನಿಯರ್‍ಗಳಿಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಂತರ್ಜಲ ಕುರಿತ ಕಾರ್ಯಾಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

IMG-20180203-WA0010ಉಪ ವಿಭಾಗಾಧಿಕಾರಿಗಳು ನಂಜುಂಡೇಗೌಡ ಅವರು ಕೈಪಿಡಿ ಭಾಗಗಳನ್ನು ಬಿಡುಗಡೆ ಮಾಡಿ, ಹೆಚ್ಚು ಮಳೆ ಬೀಳುವ ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಮಳೆಯ ಪ್ರಮಾಣ ಕುಸಿದಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ನಿಟ್ಟಿನಲ್ಲಿ ನೀರಿನ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ನೀರಿನ ಬಳಕೆ ಹಾಗೂ ಸುಸ್ಥಿರ ಅಧಿವೃಧ್ಧಿ ಮಾಡುವ ನಿಟ್ಟಿನಲ್ಲಿ ಕಾರ್ಯಸೂಚಿ ತಯಾರಿಸಿಕೊಂಡು ಅಂತರ್ಜಲ ಅಭಿವೃದ್ಧಿ ಮಾಡಲು ಪಣ ತೊಡಬೇಕು ಹಾಗೂ ಮುಂದಿನ ಪೀಳಿಗೆಯ ಹಿತಾಸಕ್ತಿ ವಹಿಸಿ ನೀರನ್ನು ಸಂರಕ್ಷಿಸುವಂತ ಯೋಜನೆಗಳನ್ನು ಹಮ್ಮಿಕೊಳ್ಳಬೇಕು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಮಾಡಬೇಕು ಹಾಗೂ ಗ್ರಾ.ಪಂ.ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಮಾಡುವ ವ್ಯವಸ್ಥೆಯನ್ನು ಅಳವಡಿಸಿ ಜನರಲ್ಲಿ ನೀರಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿವಲ್ಲಿ ಶ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಸಮಸ್ಯೆ ಮತ್ತು ಅವುಗಳನ್ನು ನಿಭಾಯಿಸುವಲ್ಲಿ ಉಂಟಾಗುವ ಸಾಮಾಜಿಕ ಜಟಿಲತೆಗಳನ್ನು ತಿಳಿಸಿ, ಇಂತಹ ಕಾರ್ಯಾಗಾರಗಳು ಅಂತರ್ಜಲ ಸಂರಕ್ಷಣೆ, ನೀರಿನ ಮಿತ ಬಳಕೆ ಮತ್ತು ನಿರ್ವಹಣೆ ಮಾಡುವಲ್ಲಿ ಹೆಚ್ಚಿನ ನೆರವಾಗುತ್ತದೆ. ಕಳೆದ ಸಾಲಿನಲ್ಲಿ ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಿ, ಅಂತರ್ಜಲ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ ಎಂದರು.

IMG-20180203-WA0011

ನಂತರದ ದಿನಗಳಲ್ಲಿ ಮಳೆಯಾದ್ದರಿಂದ ಕಾರ್ಯಕ್ರಮಗಳ ಪ್ರಗತಿಯ ಪರಿಶೀಲನೆಯಾಗಿಲ್ಲ. ಕೊಡಗು ಜಿಲ್ಲೆಯ ಹವಾಮಾನ ಹಾಗೂ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯೋಜನೆ ಹಮ್ಮಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಪಿ.ಇ.ಎಸ್. ಕಾಲೇಜು ಸಿವಿಲ್ ವಿಭಾಗ ಪ್ರಾಧ್ಯಾಪಕರಾದ ಡಾ.ಪ್ರಸನ್ನಕುಮಾರ್ ಅವರು ಅಂತರ್ಜಲ ಸಂರಕ್ಷಣೆ, ಸದ್ಬಳಕೆ, ಮರು ಪೂರೈಕೆ, ಗುಣಮಟ್ಟ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿತೆ ನೀಡಿದರು.

ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಕೆ.ಜಿ.ಸೌಮ್ಯ ಅವರು ಕುಡಿಯುವ ನೀರಿನ ಮೂಲಗಳ ಸಂರಕ್ಷಣೆ ಕಾಯ್ದೆ 1999 ಹಾಗೂ ಅಂತರ್ಜಲ ಅದಿನಿಯಮ 2011 ಮತ್ತು ವಿಫಲ ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳುವ ಅವಘಡಗಳನ್ನು ತಪ್ಪಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು. ಅಧಿಕಾರಿಗಳು ಇಂತಹ ಸಂದರ್ಭಗಳಲ್ಲಿ ಉದ್ಬವಿಸುವ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಸಿದರು.

IMG-20180203-WA0012

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರರಾದ ಗೋಪಾಲಕೃಷ್ಣ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಬಿ.ರೇಷ್ಮ, ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ಕೆ.ಜಿ.ಸೌಮ್ಯ ಇತರರು ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *