ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅರಣ್ಯ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ

Posted on: February 23, 2018

WhatsApp Image 2018-02-23 at 8.17.47 AM (1)

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರವಾಗಿ ಕಾಡಾನೆ ಸೇರಿದಂತೆ ವನ್ಯ ಜೀವಿಗಳ ಹಾವಳಿಯಿಂದ ಬೆಳೆ ಹಾನಿಯೊಂದಿಗೆ ಜೀವಹಾನಿ ಸಂಭವಿಸುತ್ತಿದ್ದರೂ ಸಮಸ್ಯೆಗೆ ಸೂಕ್ತ ಪರಿಹಾರ ಸೂಚಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಬೆಳೆಗಾರರು ಹಾಗೂ ಕಾರ್ಮಿಕ ಸಮೂಹ ಬೃಹತ್ ಪ್ರತಿಭಟನೆ ನಡೆಸಿ ಅರಣ್ಯ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ರೈತ ಸಂಘದ ಜಿಲ್ಲಾ ಘಟಕ, ಕೊಡಗು ಜಿಲ್ಲಾ ರೈತರು ಮತ್ತು ಕಾರ್ಮಿಕರ ಅರಣ್ಯ ಹೋರಾಟ ಸಮಿತಿ ಸೇರಿದಂತೆ ಸಿಪಿಐಎಂ, ದಲಿತ ಸಂಘರ್ಷ ಸಮಿತಿ, ಯುಕೋ, ಕಾರ್ಮಿಕ ಸಂಘಟನೆಗಳು ಒಗ್ಗೂಡಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಅರಣ್ಯ ಭವನದ ಮುಂಭಾಗ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದವು.

ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಮನು ಸೋಮಯ್ಯ, ಹೋರಾಟ ಸಮಿತಿಯ ಅಧ್ಯಕ್ಷ ಪ್ರವೀಣ್ ಬೋಪಯ್ಯ ಅವರ ಮುಂದಾಳತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಗಾಂಧಿ ಮೈದಾನದಿಂದ ಅರಣ್ಯ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

 

ಸುತ್ತೋಲೆಗೆ ಅಗ್ನಿ ಸ್ಪರ್ಶ

ಕಾಡಾನೆ ಸೇರಿದಂತೆ ವನ್ಯ ಜೀವಿಗಳ ಹಾವಳಿಯಿಂದ ಉಂಟಾಗುತ್ತಿರುವ ಕೃಷಿ ಹಾನಿ, ಜೀವಹಾನಿಗೆ ಸಂಬಂಧಿಸಿದಂತೆ ನೀಡಬೇಕಾಗಿರುವ ಪರಿಹಾರದ ಕುರಿತ ಅರಣ್ಯ ಇಲಾಖೆಯ ಸುತ್ತೋಲೆ ಅವೈಜ್ಞಾನಿಕವೆಂದು ಆರೋಪಿಸಿದ ಪ್ರತಿಭಟನಾಕಾರರು, ಸುತ್ತೋಲೆಯ ಪ್ರತಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಗೆಡಹಿದರು.

ಈ ಸಂದರ್ಭ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಮನು ಸೋಮಯ್ಯ, ವನ್ಯ ಜೀವಿಗಳ ಹಾವಳಿಯಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದಲ್ಲಿ ನೀಡುತ್ತಿರುವ 5 ಲಕ್ಷ ಪರಿಹಾರ ಧನವನ್ನು 30 ಲಕ್ಷಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ, ಪ್ರಸ್ತುತ ಬೆಳೆಗಾರ ಸಮೂಹ ಆನೆ ಹಾವಳಿಯಿಂದ ತೀವ್ರ ಸಂಕಷ್ಟವನ್ನೆದುರಿಸುತ್ತಿದೆ. ಇದಕ್ಕೆ ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆಯೆಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ಬಳಿಗೆ ಬಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು ಅವರನ್ನು ರೈತ ಸಂಘಟನೆಯ ಪ್ರಮುಖರು ತೀವ್ರ ತರಾಟೆಗೆ ಒಳಪಡಿಸಿ, ವನ್ಯ ಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳದಿರುವ ಕ್ರಮವನ್ನು ಖಂಡಿಸಿದ್ದಲ್ಲದೆ, ಪರಿಹಾರದ ಸುತ್ತೋಲೆಯನ್ನು ಬದಲಿಸಬೇಕೆಂದು ಒತ್ತಾಯಿಸಿದರು.

ಸಿಸಿಎಫ್ ಲಿಂಗರಾಜು ಪ್ರತಿಕ್ರಿಯಿಸಿ, ಆನೆ ಹಾವಳಿ ತಡೆಗೆ ಸಿದ್ದಾಪುರ, ವೀರಾಜಪೇಟೆ ವಿಭಾಗದಲ್ಲಿ ಮೂವತ್ತು ಕ್ಯಾಂಪ್ ಗಳನ್ನು ಮಾಡಲಾಗಿದ್ದು, ಆನೆ ಹಾವಳಿಯ ಸಂದರ್ಭ ಸ್ಪಂದಿಸಲಾಗುತ್ತಿದೆ. 10 ಕಿ.ಮೀ. ರೈಲ್ವೆ ಹಳಿಗಳ ಬೇಲಿ ನಿರ್ಮಾಣಕ್ಕೆ ಈಗಾಗಲೆ ಟೆಂಡರ್ ನಡೆಸಿದೆ, ಶ್ರೀಲಂಕಾ ಮಾದರಿಯ ಸೋಲಾರ್ ಬೇಲಿ ನಿರ್ಮಾಣಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಜಿಲ್ಲೆಯ 100 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ಅಗತ್ಯವಾದ ಆಹಾರ ಒದಗಿಸುವ ಪ್ಲಾಂಟೇಷನ್ ಮಾಡಲಾಗುವುದೆಂದು ತಿಳಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *