ಅಲ್ಪಸಂಖ್ಯಾತರು ಗೊಂದಲದ ಹೇಳಿಕೆಗಳಿಗೆ ಕಿವಿಗೊಡಬೇಡಿ ಕೆ.ಎ.ಯಾಕುಬ್ ಮನವಿ

Posted on: February 14, 2018

Z Yakub 1
ಮಡಿಕೇರಿ  : ಇತ್ತೀಚೆಗೆ ಸೋಮವಾರಪೇಟೆಯಲ್ಲಿ ಒಂದು ವರ್ಗಕ್ಕೆ ನೋವುಂಟು ಮಾಡುವ ರೀತಿಯಲ್ಲಿ ಮಾತನಾಡಿದ ಆರೋಪ ಎದುರಿಸುತ್ತಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಎಂ.ಎಸ್.ನಂದಕುಮಾರ್ ಅವರಿಗೆ ಡಿಸಿಸಿ ಯಿಂದ ನೋಟೀಸ್ ನೀಡಲಾಗಿದೆ. ಅಲ್ಲದೆ ಕೆಪಿಸಿಸಿ ಗಮನಕ್ಕೂ ತರಲಾಗಿದ್ದು, ಈ ವಿಚಾರದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಅಲ್ಪಸಂಖ್ಯಾತರು ಕಿವಿಗೊಡಬಾರದೆಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕುಬ್ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಪಕ್ಷ ಒಂದು ತುಂಬು ಕುಟುಂಬವಿದ್ದಂತೆ, ಈ ಕುಟುಂಬದಲ್ಲಿ ನಡೆಯುವ ಸಣ್ಣಪುಟ್ಟ ವ್ಯಾತ್ಯಾಸಗಳನ್ನು ಪಕ್ಷದ ಮನೆಯೊಳಗೆ ಸರಿಪಡಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಎಂ.ಎಸ್.ನಂದಕುಮಾರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶೀಲನೆ ನಡೆಸುತ್ತಿದೆ. ಅಲ್ಲದೆ ನಂದಕುಮಾರ್ ಅವರು ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದೊಳಗಿನ ಅಲ್ಪಸಂಖ್ಯಾತರ ಒಗ್ಗಟ್ಟನ್ನು ಸಹಿಸದ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮಸಿ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಇದಕ್ಕೆ ಅಲ್ಪಸಂಖ್ಯಾತರು ಕಿವಿಗೊಡಬಾರದೆಂದು ಮನವಿ ಮಾಡಿರುವ ಕೆ.ಎ.ಯಾಕುಬ್, ಪಕ್ಷದಲ್ಲಿ ಉಂಟಾಗುವ ಆಂತರಿಕ ಅತೃಪ್ತಿಗಳನ್ನು ಪಕ್ಷದ ವೇದಿಕೆಯಲ್ಲೇ ಸರಿಪಡಿಸಿಕೊಳ್ಳಬೇಕೆ ಹೊರತು ಪಕ್ಷದ ಗೆಲುವಿಗೆ ಅಡ್ಡಿಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದೆಂದು ಕರೆ ನೀಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *