ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಆಡಳಿತ ವೆಂಕಪ್ಪಗೌಡ ಹೇಳಿಕೆ

Posted on: February 21, 2018
IMG_20180220_134930
ಕುಶಾಲನಗರ : ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ವೆಂಕಪ್ಪಗೌಡ ಹೇಳಿದರು.
ಕುಶಾಲನಗರದ ಪ್ರವಾದಿ‌ಮಂದಿರದಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷವಾದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ಹಲವಾರು ಅನುಕೂಲಕರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಾ ಬಂದಿದ್ದು, ಇದರ ಸದುಪಯೋಗವನ್ನು ಜನರು ಪಡೆಯುತ್ತಿದ್ದಾರೆ ಎಂದ ಅವರು, ಬಿಜೆಪಿ ಪಕ್ಷ ಆಶ್ವಾಸನೆ ನೀಡುವುದೇ ಅವರಿಗೆ ಒಂದು ಹವ್ಯಾಸವಾಗಿದೆ ಎಂದು ಟೀಕಿಸಿದರು.
ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭ ಜಿಲ್ಲಾಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ವಿ.ಪಿ.ಶಶಿಧರ್,  ಜಿಲ್ಲಾಧ್ಯಕ್ಷರಾದ ಶಿವುಮಾದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಮ್.ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಮೋದ್ ಮುತ್ತಪ್ಪ, ಕರಿಯಪ್ಪ, ನಗರಾಧ್ಯಕ್ಷ ಜೋಸೆಫ್ ವಿಕ್ಟರ್, ಪದಾಧಿಕಾರಿಗಳಾದ ಎಮ್.ಇ.ಮುಸ್ತಫಾ, ಜಕ್ರಿಯಾ, ಅಶ್ರಫ್, ಫಿರೋಝ್ ಹಾಗೂ ಮತ್ತಿತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *