ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಲಾಂಛನ ಬಿಡುಗಡೆ

Posted on: February 23, 2018

DSC03487
ಮಡಿಕೇರಿ : ಮುಂಬರುವ ಕರ್ನಾಟಕ ವಿಧಾನ ಸಭಾ 2018ರ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಿಕೆಯ ಕುರಿತಂತೆ ಜಾಗೃತಿ ಮೂಡಿಸಲು ರಚನೆಯಾಗಿರುವ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಲಾಂಛನ (ಲೋಗೊ)ವನ್ನು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಬಿಡುಗಡೆಗೊಳಿಸಿದರು.

ನಗರದ ಕೋಟೆ ಹಳೇ ಸಭಾಂಗಣದಲ್ಲಿ ಲಾಂಛನ (ಲೋಗೊ) ಬಿಡುಗಡೆಗೊಳಿಸಿ ಮಾತನಾಡಿದ ಅವರು ಚುನಾವಣೆಯಲ್ಲಿ 18 ವರ್ಷ ಪೂರೈಸಿದ ನೋಂದಾಯಿತ ಎಲ್ಲಾ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

DSC03489

ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ವಿಧಾನ ಸಭಾ ಚುನಾವಣೆಗೆ ಒಳಗೊಳ್ಳುವ ಸುಗಮ ಹಾಗೂ ನೈತಿಕ ಚುನಾವಣೆಯ ಧ್ಯೇಯದೊಂದಿಗೆ ಮುಕ್ತ ಪಾರದರ್ಶಕವಾಗಿ ಚುನವಾಣೆ ನಡೆಸಲು ಸಿದ್ದತೆ ನಡೆಸಲಾಗಿದೆ.

ವಿಶೇಷವಾಗಿ ವಿಶೇಷ ಚೇತನ ಮತದಾರರು ಮುಕ್ತವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಮತದಾರರ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿನ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ಮತದಾರರು ನಿರ್ಭಿತವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮ ನಡೆಸಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಯೋಜನಾ ನಿರ್ದೇಶಕರಾದ ಸಿದ್ದಲಿಂಗ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಲ್ಲೇಸ್ವಾಮಿ, ಕಾರ್ಯಪಾಲಕ ಎಂಜಿನಿಯರ್ ರಾಜ್‍ಕುಮಾರ್ ರೆಡ್ಡಿ, ಹಿಂದುಳಿದ ವರ್ಗಗಳ ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ಮತ್ತು ಇತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *