ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಿಲ್ಲೆಯಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲರಿಗಾಗಿ ಮುಂದುವರೆದ ಕೂಂಬಿಂಗ್ ಕಾರ್ಯಾಚರಣೆ

Posted on: February 23, 2018

26-4

ಮಡಿಕೇರಿ : ಕೊಡಗು ಮತ್ತು ದಕ್ಷಿಣಕನ್ನಡ ಗಡಿಭಾಗ ಪಶ್ಚಿಮಘಟ್ಟದಲ್ಲಿ ನಕ್ಸಲರಿರುವುದು ಖಚಿತವಾಗಿದ್ದು, ಕೇರಳ ಗಡಿಭಾಗದ ಅರಣ್ಯಪ್ರದೇಶದಲ್ಲೇ ಅಲೆದಾಡುತ್ತಿರುವುದು ಈಗಿನ ಬೆಳವಣಿಗೆಯಾಗಿದ್ದು, ಅವರ ಸೆರೆಗೆ ನಕ್ಸಲ್ ನಿಗ್ರಹದಳ ಸಜ್ಜಾಗಿದ್ದು, ಈಗಾಗಲೇ ಕೂಂಬಿಂಗ್ ಆರಂಭಗೊಂಡಿದೆ. ಕೆಲವು ದಿನಗಳ ಹಿಂದೆ ಕೊಡಗಿನ ಗಡಿಭಾಗ ಸಂಪಾಜೆ ಅರಣ್ಯ

25-4ಕಾಣಿಸಿಕೊಂಡಿದ್ದ ಮೂವರು ನಕ್ಸಲರು ಇದೀಗ ನಾಪೋಕ್ಲು ವ್ಯಾಪ್ತಿಯಲ್ಲಿ ಕಾಣಿಸಿಕೊಂಡು ಕೆಲ ದಿನಗಳ ಹಿಂದೆ ಕಕ್ಕಬ್ಬೆ ನಾಲಾಡಿ ಗ್ರಾಮದ ಬಲ್ಲಚಂಡ ಎಸ್ಟೇಟ್ ನ ರೈಟರ್ ರಘು ಪೆಮ್ಮಯ್ಯ ಅವರ ಮನೆಗೆ ದಿಢೀರ್ ಭೇಟಿ ನೀಡಿ ದಿನಬಳಕೆ ವಸ್ತುಗಳನ್ನು ಪಡೆದು ಅವರಲ್ಲಿ ಊಟ ಮಾಡಿ ತೆರಳಿದ್ದಾರೆ ಎಂಬ ಸುದ್ದಿ ಬಯಲಾಗಿದೆ.
23-7
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಹಾಗೂ ಡಿವೈಎಸ್ಪಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ನಕ್ಸಲ್ ನಿಗ್ರಹದಳ  ಮಾಹಿತಿ ಕಲೆಹಾಕಿ ಸುಮಾರು 100 ಎಕರೆಯ ಬಲ್ಲಚಂಡ ಎಸ್ಟೇಟ್, ತಡಿಯಂಡಮೋಳ್ ಬೆಟ್ಟಶ್ರೇಣಿ, ಕೊಡಗು ಕೇರಳ ಗಡಿಯ ಬಾಯಿಕಟ್ಟೆ ಅರಣ್ಯ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸುತ್ತಿದ್ದಾರೆ. ಆದರೆ ನಕ್ಸಲರ ಸುಳಿವು ಮಾತ್ರ ಸಿಕ್ಕಿಲ್ಲ. ಅವರು ಕೇರಳಕ್ಕೆ ದಾಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೂವರು ನಕ್ಸಲರಲ್ಲಿ ಪೊಲೀಸರಿಗೆ ಬೇಕಾಗಿರುವ ನಕ್ಸಲ್ ನಾಯಕರಾದ ವಿಕ್ರಂಗೌಡ ಹಾಗೂ ಚಂದ್ರು ಇರುವುದು ಖಚಿತವಾಗಿದೆ. ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ ಗಡಿಭಾಗದಲ್ಲಷ್ಟೆ ಕಾಣಿಸಿಕೊಳ್ಳುತ್ತಿದ್ದ ಈ ನಕ್ಸಲರು ಇದೀಗ ಕೊಡಗಿನಲ್ಲಿ ಕಾಣಿಸಿಕೊಳ್ಳುವುದು ಆತಂಕಕ್ಕೆ ಕಾರಣವಾಗಿದೆ.29-1

ಈ ನಕ್ಸಲರು ಫೆ.2ರಂದು ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿಪ್ರದೇಶ ಕೊಯನಾಡು ವ್ಯಾಪ್ತಿಯಲ್ಲಿ ಕಂಡು ಬಂದಿದ್ದರು. ತಕ್ಷಣ ಕೂಂಬಿಂಗ್ ನಡೆಸಲಾಗಿತ್ತು. ಆದರೆ ಅವರ ಸುಳಿವೇ ಪತ್ತೆಯಾಗಿರಲಿಲ್ಲ. ಆದರೆ ಕೆಲವೇ ದಿನಗಳಲ್ಲಿ ಧುತ್ತನೆ ಪ್ರತ್ಯಕ್ಷವಾಗಿರುವುದು ಮತ್ತಷು ಆತಂಕ ಸೃಷ್ಟಿಸಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *