ನಾಳೆ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಭೆ

Posted on: February 14, 2018

congress2
ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಮಿತಿ, ಐದು ಬ್ಲಾಕ್ ಸಮಿತಿ ಮತ್ತು ಜಿಲ್ಲಾ ವಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಫೆ.16 ರಂದು ನಡೆಯಲಿದೆ.

ಪ್ರತಿಕಾ ಹೇಳಿಕೆ ನೀಡಿರುವ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ವಿ.ಕೆ.ಸತೀಶ್ ಕುಮಾರ್ ನಗರದ ಹೊಟೇಲ್ ವ್ಯಾಲ್ಯುವ್‍ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಭೆಯಲ್ಲಿ ರಾಜ್ಯ ಸಮಿತಿ ಸಂಚಾಲಕ ಹಾಗೂ ಜಿಲ್ಲಾ ಉಸ್ತುವಾರಿ ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *