ಪೇರೂರಿನ ಇಗ್ಗುತ್ತಪ್ಪ ದೇವಾಲಯದಲ್ಲಿ ದೇವರ ನೃತ್ಯಬಲಿ

Posted on: February 14, 2018

14npk-2

ನಾಪೋಕ್ಲು : ಶಿವರಾತ್ರಿ ಹಬ್ಬದ ಅಂಗವಾಗಿ ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.

ಮೂರು ಇಗ್ಗುತ್ತಪ್ಪ ದೇವಾಲಯಗಳಲ್ಲಿ ಒಂದಾದ ಪೇರೂರು ಗ್ರಾಮದ ಬಲ್ಲತ್ತನಾಡು ಪೆರ್ಮೆ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು.

14npk-1

ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು.

ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು,ಉಪಾಧ್ಯಕ್ಷರು, ಕಾರ್ಯದರ್ಶಿ,ಸದಸ್ಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *